ಬೆಳಗಾವಿ:ಪಕ್ಕದ ಮನೆಯ ಮಗುವನ್ನು ಕೊಲೆ ಮಾಡಿ ಜೈಲುಪಾಲಾಗಿದ್ದವ ಅಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮೂಳೆ ಗ್ರಾಮದ ಸಿದ್ದಗೌಡ ಹಿಪ್ಪಲಕರ್ (34) ಆತ್ಮಹತ್ಯೆ ಮಾಡಿಕೊಂಡ ಕೈದಿ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಈ ಪ್ರಕರಣ ನಡೆದಿದೆ. ನಾಲ್ಕು ದಿನಗಳ ಹಿಂದೆ ಈತ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಬಳಿಕ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈತ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ.
ಪಕ್ಕದ ಮನೆಯ ಮಗುವನ್ನ ಕೊಲೆ ಮಾಡಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಈತ ಆರು ವರ್ಷಗಳಿಂದ ಹಿಂಡಲಗಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ. ಈ ಸಾವಿಗೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಜನ್ಮದಿನದಂದೇ ಮರಣ: ಬೈಕ್​ನಲ್ಲಿ ಹೋಗುವಾಗ ತಲೆ ಮೇಲೇ ಬಿದ್ದ ಮರ..!

ತೋಟಕ್ಕೇ ಬಂದ ಹುಲಿಗೆ ಯುವಕ ಬಲಿ; ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
