ಕೋಲಾರ:ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಕಾಂಗ್ರೆಸ್ ಆಯೋಜನೆ ಮಾಡಿದ್ದ ಪಾದಯಾತ್ರೆಗೆ ತೆರಳಿದ್ದ ವ್ಯಕ್ತಿ ಅನಾಥ ಶವವಾಗಿ ಪತ್ತೆಯಾಗಿದ್ದಲ್ಲದೆ, ಆತನನ್ನು ಪೊಲೀಸರೇ ಅಂತ್ಯಕ್ರಿಯೆ ಮಾಡಿದ್ದರು. ಇದೀಗ ಆತನ ಕುರಿತಂತೆ ಕುಟುಂಬಸ್ಥರು ಪೊಲೀಸ್ ಠಾಣೆಗೆ ತೆರಳಿದ್ದಾರೆ.
ಕೋಲಾರ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದ ಗೋವಿಂದಪ್ಪ (47) ಕಾಂಗ್ರೆಸ್​ ಆಯೋಜನೆ ಮಾಡಿದ್ದ ಪಾದಯಾತ್ರೆಗೆ ತೆರಳಿದ್ದು, ಆ. 16ರಂದು ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆತನನ್ನು ಅನಾಥ ಶವ ಎಂದು ಪರಿಗಣಿಸಿದ್ದ ಹೊಸಕೋಟೆ ಪೊಲೀಸರು ಅಂತ್ಯಕ್ರಿಯೆ ನಡೆಸಿದ್ದರು.
ಇದನ್ನೂ ಓದಿ:ರಾತ್ರಿ ಮನೆಯಲ್ಲಿ ಮಲಗಿದ್ದ ಯುವತಿ ಬೆಳಗ್ಗೆ ನಾಪತ್ತೆ!
ಇತ್ತ ಗೋವಿಂದಪ್ಪ ಮನೆಗೆ ಬರದ್ದರಿಂದ ಚಿಂತೆಗೀಡಾದ ಕುಟುಂಬಸ್ಥರು, ಆತನ ಬರುವಿಕೆಗೆ ಕಾದು ಬಳಿಕ ಕೋಲಾರ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಪ್ರಕಾರ ತನಿಖೆಗಿಳಿದ ಕೋಲಾರ ಗ್ರಾಮಾಂತರ ಪೊಲೀಸರಿಗೆ ಗೋವಿಂದಪ್ಪನ ಶವವನ್ನು ಹೊಸಕೋಟೆ ಪೊಲೀಸರು ಅಂತ್ಯಕ್ರಿಯೆ ನಡೆಸಿದ್ದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಗೋವಿಂದಪ್ಪ ಕುಟುಂಬಸ್ಥರು ಹೊಸಕೋಟೆ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಸ್ಥಳೀಯ ಕಾಂಗ್ರೆಸ್ ಮುಖಂಡರು ಗೋವಿಂದಪ್ಪನನ್ನು ಪಾದಯಾತ್ರೆಗೆ ಕರೆದೊಯ್ದಿದ್ದರು.
ಖ್ಯಾತ ನಟನಿಗೆ ಕ್ಯಾನ್ಸರ್​, ಧನಸಹಾಯಕ್ಕಾಗಿ ಸಾರ್ವಜನಿಕರಲ್ಲಿ ಕೋರಿಕೆ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − nine =
Remember me
