ಬೆಂಗಳೂರು:ಸಾಕಷ್ಟು ಚರ್ಚೆಯಲ್ಲಿದ್ದ ಆನ್​ಲೈನ್​ ಶಿಕ್ಷಣದ ಬಗ್ಗೆ ಸರ್ಕಾರ ಕೊನೆಗೂ ಒಂದು ನಿರ್ಧಾರಕ್ಕೆ ಬಂದಿದ್ದು, ಈ ಕೂಡಲೇ ಎಲ್​ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಹಂತದ (1 ರಿಂದ 5) ತರಗತಿಗಳಲ್ಲಿ ಆನ್​ಲೈನ್​ ಶಿಕ್ಷಣವನ್ನು ರದ್ದುಗೊಳಿಸುವಂತೆ ಆದೇಶಿಸಿದೆ.
ಬುಧವಾರ ತಜ್ಞರ ಜತೆ ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರೇಶ್​ ಕುಮಾರ್​ ಅವರು, ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆನ್​ಲೈನ್​ ಶಿಕ್ಷಣವನ್ನು ರದ್ದು ಮಾಡಿರುವುದಾಗಿ ತಿಳಿಸಿದರು. ಈ ಕೂಡಲೇ ಆನ್​​ಲೈನ್​ ಶಿಕ್ಷಣ ಹೆಸರಿನಲ್ಲಿ ನಡೆಯುತ್ತಿರುವ ತರಗತಿಗಳನ್ನು ನಿಲ್ಲಿಸಬೇಕು ಎಂದು ನಿರ್ದೇಶಿಸಿದರು.
ಆನ್​ಲೈನ್​ ಟೀಚಿಂಗ್​ ಹೆಸರಿನಲ್ಲಿ ಶುಲ್ಕ ತೆಗೆದುಕೊಳ್ಳುವುದನ್ನು ಈ ಕೂಡಲೇ ನಿಲ್ಲಿಸಬೇಕು. ಈ ಬಗ್ಗೆ ಈಗಾಗಲೇ ಒಂದು ಸುತ್ತೋಲೆಯನ್ನು ಹೊರಡಿಸಿದ್ದೇವೆ. ಕೋವಿಡ್​ 19 ಎಲ್ಲ ಕುಟುಂಬಗಳನ್ನು ಆರ್ಥಿಕವಾಗಿ ಕುಗ್ಗಿಸಿದೆ. ಅನೇಕರು ಕೆಲಸವನ್ನೇ ಕಳೆದುಕೊಂಡಿದ್ದಾರೆ. ಅನೇಕರಿಗೆ ವೇತನದಲ್ಲಿ ಕಡಿತವಾಗಿದೆ. ವಿವಿಧ ರೀತಿಯ ಸಮಸ್ಯೆಗಳನ್ನು ಸಮಾಜ ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಈ ವರ್ಷ ಮಾನವೀಯ ದೃಷ್ಟಿಯಿಂದ ಯಾರೂ ಕೂಡ ಶಾಲಾ ಶುಲ್ಕದಲ್ಲಿ ಹೆಚ್ಚಳವನ್ನು ಮಾಡಬಾರದು ಎಂದು ಮನವಿ ಮಾಡಿದರು.
ಶಿಕ್ಷಣ ಸಂಸ್ಥೆಗಳು ಸ್ವಇಚ್ಛೆಯಿಂದ ನಿರ್ಧಾರ ಮಾಡಿದರೆ ಸ್ವಾಗತ. ಈ ವರ್ಷ ಅರ್ಧ ತರಗತಿಗಳು ನಡೆಯುವುದಿಲ್ಲವಾದ್ದರಿಂದ ಅರ್ಧ ಶುಲ್ಕವನ್ನು ಪಡೆಯುವುದಾದರೆ ಉತ್ತಮ ಎಂದು ಸಚಿವರು ಯಾವುದೇ ಕಾರಣಕ್ಕೂ ಶುಲ್ಕವನ್ನು ಮಾತ್ರ ಹೆಚ್ಚಳ ಮಾಡಬಾರದೆಂದು ತಿಳಿಸಿದರು.
https://www.facebook.com/DighvijayNews/videos/799235570606461/UzpfSTk4MjQwNzE4ODQ1Mzk0NjozNDY4NDM3NDA5ODUwODk5/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 7 =
Remember me
