ಬೆಂಗಳೂರು:ಆನ್​ಲೈನ್ ಶಿಕ್ಷಣ ನಿರ್ವಹಣೆಗೆ ಸಂಬಂಧಿಸಿದಂತೆ ಪೋಷಕರ ಮತ್ತು ಸಾರ್ವಜನಿಕರ ಯಾವುದೇ ದೂರುಗಳಿದ್ದರೂ ಶಿಕ್ಷಣ ಇಲಾಖೆಯ ಶಿಕ್ಷಣವಾಣಿ-ಸಾರ್ವಜನಿಕ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಿಕ್ಷಣವಾಣಿ-ಸಹಾಯವಾಣಿಗೆ (18004257302) ಇಲ್ಲವೇ ಸಹಾಯವಾಣಿ ವಾಟ್ಸ್ಆ್ಯಪ್ ನಂಬರ್​ 9483045130 ಗೆ ಪೋಷಕರು ಕರೆ ಮಾಡಿ ಆನ್​ಲೈನ್​ ಶಿಕ್ಷಣ ನಿರ್ವಹಣೆ ಕುರಿತ ದೂರುಗಳನ್ನು ತಿಳಿಸಬಹುದು. ಇಂತಹ ದೂರುಗಳನ್ನು ನಿರ್ವಹಿಸಲು ಕೂಡಲೇ ಆಯುಕ್ತರ ಕಚೇರಿ ಮತ್ತು ಜಿಲ್ಲಾ ಮಟ್ಟದಲ್ಲಿ ಉಪನಿರ್ದೇಶಕರ ಹಂತದಲ್ಲಿ ಒಬ್ಬೊಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಬೆಂಗಳೂರು, ಕಲಬುರಗಿ, ಬೆಳಗಾವಿ, ಮಂಗಳೂರು, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಹಲವು ನಗರ ಕೇಂದ್ರಿತ ಪ್ರದೇಶಗಳಲ್ಲಿ ಇಂತಹ ದೂರು ಹೆಚ್ಚಾಗಿರುವುದರಿಂದ ಅಧಿಕಾರಿಗಳು ಆನ್​ಲೈನ್ ಶಿಕ್ಷಣದಲ್ಲಿನ ಸಮಸ್ಯೆ ಮತ್ತು ದೂರುಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಪರಿಹಾರ ಸೂಚಿಸಬೇಕು ಎಂದು ಇಲಾಖೆ ಆಯುಕ್ತರಿಗೆ ಸಚಿವರು ಸಲಹೆ ನೀಡಿದರು.
ತಜ್ಞರ ಸಮಿತಿ ನಿಗದಿಪಡಿಸಿರುವ ಸಮಯದಷ್ಟೇ ಆನ್​ಲೈನ್​ ತರಗತಿ ನಿರ್ವಹಿಸಬೇಕು. ಇದು ಎಲ್ಲ ಶಾಲೆಗಳಿಗೂ ಅನ್ವಯ. ಬಿಇಒಗಳು ಆನ್​ಲೈನ್ ತರಗತಿಗಳ ಬಗ್ಗೆ ಪರಾಮರ್ಶೆ ಮಾಡಬೇಕು. ಆನ್‍ಲೈನ್ ತರಗತಿಯಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಯುಕ್ತರಿಗೆ ಸುರೇಶ್​ ಕುಮಾರ್​ ಸೂಚಿಸಿದರು.
ಕೇಂದ್ರದ ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ಇಡೀ ರಾಷ್ಟ್ರದಲ್ಲಿ ಮೊದಲ ರಾಜ್ಯವಾಗಲಿದೆ. ರಾಜ್ಯದಲ್ಲಿ ನೂತನ ಶಿಕ್ಷಣ ನೀತಿ ಅಳವಡಿಕೆಗೆ ಸಂಬಂಧಿಸಿದಂತೆ ನೇಮಿಸಲಾದ ತಜ್ಞರ ಸಮಿತಿ ನ.7ರಂದು ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಆರ್​ ಆರ್​ ನಗರದಲ್ಲಿ ಜೆಡಿಎಸ್​ ಗೆಲ್ಲೋದಿಲ್ಲ ಎಂದ ಎಚ್​ಡಿಕೆ!

ತವರು ಕ್ಷೇತ್ರದಲ್ಲೇ ಡಾ.ಜಿ.ಪರಮೇಶ್ವರ್​ಗೆ​ ಭಾರಿ ಮುಖಭಂಗ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen − seven =
Remember me
