ಬೆಂಗಳೂರು:ರಾಜ್ಯದಲ್ಲೂ ಆನ್​ಲೈನ್ ಗೇಮ್‌ಗೆ ನಿಷೇಧ ನಿಶ್ಚಿತ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಆನ್‌ಲೈನ್ ಗೇಮ್ ಸಹವಾಸದಿಂದ ಯುವಕರು ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಕೆಲ ಪೋಷಕರು ಹಾಗೂ ಸಾರ್ವಜನಿಕರು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಲಿಖಿತ ದೂರು ನೀಡಿದ್ದಾರೆ. ಆನ್‌ಲೈನ್ ಗೇಮ್​ಗಳಿಂದಾಗಿ ಯುವಕರು ಕಾನೂನು ಬಾಹಿರ ಚಟುವಟಿಕೆಯಲ್ಲೂ ತೊಡಗಿದ್ದಾರೆ. ಇದಕ್ಕೆ ಕಡಿವಾಣ ಹಾಕದಿದ್ದರೆ ಯುವಜನತೆಯನ್ನು ಕಳೆದುಕೊಳ್ಳಬೇಕಾಗುತ್ತೆ. ಹಾಗಾಗಿ ಆನ್‌ಲೈನ್ ಗೇಮ್ ನಿಷೇಧಿಸಲು ಮುಂದಾಗಿದ್ದೇವೆ. ಈ ಸಂಬಂಧ ಶೀಘ್ರವೇ ಹೊಸ ಕಾನೂನು ಜಾರಿಗೆ ಬರಲಿದೆ ಎಂದು ತಿಳಿಸಿದರು.
ಈಗಾಗಲೇ ಅನೇಕ ರಾಜ್ಯಗಳಲ್ಲಿ ಆನ್‌ಲೈನ್ ಗೇಮ್​ ನಿಷೇಧಿಸಲಾಗಿದೆ. ಅಲ್ಲಿನ ಸರ್ಕಾರಗಳು ಯಾವ ಯಾವ ನಿಯಮ ಮತ್ತು ಕಾನೂನು ಜಾರಿಗೊಳಿಸಿದ್ದಾರೆ ಎಂಬುದರ ಬಗ್ಗೆ ಅಧ್ಯಯನ ಮಾಡುತ್ತಿದ್ದೇವೆ. ರಾಜ್ಯದಲ್ಲೂ ಶೀಘ್ರವೇ ಆನ್​ಲೈನ್ ಗೇಮ್‌ಗೆ ನಿಷೇಧ ಹೇರುವುದು ನಿಶ್ಚಿತ ಎಂದು ಗೃಹ ಸಚಿವರು ಹೇಳಿದರು.
ಡ್ರಗ್ ಪ್ರಕರಣದ ತನಿಖೆ ಮುಂದುವರಿದಿದೆ. ಪೊಲೀಸರು ನಿಷ್ಪಕ್ಷಪಾತ ಹಾಗೂ ನಿರ್ಭೀತಿಯಿಂದ ತನಿಖೆ ನಡೆಸುತ್ತಿದ್ದಾರೆ. ಹಿಂದಿನ ಯಾವುದೇ ಸರ್ಕಾರಗಳು ತೆಗೆದುಕೊಳ್ಳದಿರುವ ದಿಟ್ಟ ಕ್ರಮಗಳನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ನಿಷ್ಪಕ್ಷಪಾತ ತನಿಖೆಯಿಂದಾಗಿ ಘಟಾನುಘಟಿಗಳು ಜೈಲು ಪಾಲಾಗಿದ್ದಾರೆ ಎಂದು ಪುನರುಚ್ಛರಿಸಿದರು.
ಪ್ರತಿದಿನ ಒಂದಿಲ್ಲೊಂದು ಹೊಸ ಹೊಸ ಎಫ್​ಐಆರ್ ದಾಖಲಾಗುತ್ತಲೇ ಇವೆ. ಇದು ನಿರಂತರ ಪ್ರಕ್ರಿಯೆಯಾಗಿದ್ದು, ತಾರ್ಕಿಕ ಅಂತ್ಯ ಕಾಣುವವರೆಗೂ ತನಿಖೆಯನ್ನು ನಿಲ್ಲಿಸುವುದಿಲ್ಲ. ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ. ಇದರಿಂದಾಗಿಯೇ ಅನೇಕರು ಜೈಲು ಕಂಬಿ ಎಣಿಸುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ರಾತ್ರೋರಾತ್ರಿ ಮನೆಯಲ್ಲೇ ಪತ್ನಿಯನ್ನು ಕೊಚ್ಚಿ ಹಾಕಿದ ಭೂಪ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ನಿಶ್ಚಿತಾರ್ಥಕ್ಕೆ ಹೊರಟಿದ್ದವರ ಎದುರಿಗೆ ಬಂದ ಜವರಾಯ ಐವರ ಪ್ರಾಣ ಹೊತ್ತೊಯ್ದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
