ಬೆಂಗಳೂರು:ಕರೊನಾ ನಂತರದಲ್ಲಿ ರಾಜ್ಯದಲ್ಲಿ ಕುಂಠಿತಗೊಂಡಿರುವ ಆರ್ಥಿಕ, ಕೈಗಾರಿಕಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉದ್ಯೋಗಾವಕಾಶ ಸರ್ಕಾರ ಮುಂದಾಗಿದ್ದು, ಉದ್ಯೋಗದಾತರು ಮತ್ತು ಉದ್ಯೋಗ ನಿರೀಕ್ಷೆಯಲ್ಲಿ ಇರುವವರನ್ನು ಸಂರ್ಪಸಲು ವಿವಿಧ ಪ್ರಯತ್ನ ಆರಂಭಿಸಿದೆ.
ಸೋಮವಾರ ವಿಧಾನಸೌಧದಲ್ಲಿ ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಸ್ಕಿಲ್ ಕನೆಕ್ಟ್ ಪೋರ್ಟಲ್ ಉದ್ಘಾಟಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಔದ್ಯೋಗಿಕ ಕ್ಷೇತ್ರದ ವಿವಿಧ ಮಾಹಿತಿ ಹಂಚಿಕೊಂಡರು.
ಕೌಶಲ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ವಿವಿಧ ಪಾಲುದಾರರನ್ನು ಜೋಡಿಸಲು ಈ ಪೋರ್ಟಲ್ ಅಭಿವೃದ್ಧಿಗೊಳಿಸಲಾಗಿದೆ. ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು, ತರಬೇತಿ ಕೇಂದ್ರಗಳು, ಉದ್ಯಮ, ಅಂತಾರಾಷ್ಟ್ರೀಯ ಏಜೆನ್ಸಿಗಳು ಹಾಗೂ ಸರ್ಕಾರವನ್ನು ಒಂದುಗೂಡಿಸುವ ಸಂಪರ್ಕ ಸೇತುವಾಗಿ ಸ್ಕಿಲ್ ಕನೆಕ್ಟ್ ಪೋರ್ಟಲ್ ಕಾರ್ಯನಿರ್ವಹಿಸಲಿದೆ ಎಂದರು.
ಯುವಕರಿಗೆ ಕೌಶಲ ಹೆಚ್ಚಿಸಿಕೊಳ್ಳಲು, ಅಗತ್ಯ ಕೌಶಲ ಮತ್ತು ಪರಿಣತಿ ಪಡೆಯಲು ಸರ್ಕಾರ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಖಚಿತ ಉದ್ಯೋಗಾವಕಾಶಕ್ಕಾಗಿ ಕೌಶಲ ತರಬೇತಿಗಳನ್ನು ನೀಡಲು ಮತ್ತು ಕೌಶಲಗಳನ್ನು ಉನ್ನತೀಕರಿಸಲು 1000 ಪದವೀಧರರಿಗೆ ಕೌಶಲಾಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ 2 ಕೊಟಿ ರೂ. ವೆಚ್ಚದಲ್ಲಿ ಪ್ರತಿಭಾ ಸಂವರ್ಧನ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು ಎಂದರು.
ಕರೊನಾದಿಂದಾಗಿ ಉದ್ಯೋಗಾಕಾಂಕ್ಷಿ- ಉದ್ಯೋಗದಾತರಲ್ಲಿ ಉಂಟಾಗಿರುವ ಅಂತರ ನಿವಾರಿಸಲು ಜುಲೈ 7ರಂದು ಬೃಹತ್ ಆನ್​ಲೈನ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಯಡಿಯೂರಪ್ಪ ಕರೆ ನೀಡಿದರು.
ಇದುವರೆಗೂ ರಾಜ್ಯದಲ್ಲಿ ಉದ್ಯೋಗಾಕಾಂಕ್ಷಿ ಮತ್ತು ಉದ್ಯೋಗದಾತರ ನಡುವೆ ಮಾಹಿತಿ, ಸಂಪರ್ಕದ ಕೊರತೆ ಇತ್ತು. ಈಗ ಆ ಪರಿಸ್ಥಿತಿ ಬದಲಾಗಿ ಕುಗ್ರಾಮದಲ್ಲಿರುವ ಪ್ರತಿಭಾವಂತರಿಗೂ ಎಲ್ಲೆಲ್ಲಿ ಉದ್ಯೋಗ ಸಿಗಲಿದೆ ಎಂಬ ಮಾಹಿತಿ ಸುಲಭ, ಸರಳವಾಗಿ ಸಿಗಲಿದೆ. ಪ್ರತಿಭೆಗೆ ತಕ್ಕ ಕೆಲಸ ಹಾಗೂ ಉದ್ಯೋಗದಾತರಿಗೆ ತಮ್ಮ ಅಗತ್ಯಕ್ಕೆ ತಕ್ಕ ಮಾನವ ಸಂಪನ್ಮೂಲ ಲಭ್ಯವಾಗಲಿದೆ ಎಂದು ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ಸಭೆಯಲ್ಲಿ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ರಾಜ್ಯ ಕೌಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ವಿವಿಧ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.
ಕಾರ್ಯವಿಧಾನ:ಈ ವೇದಿಕೆ ಮೂಲಕ ಕಂಪನಿಗಳು ತಮಗೆ ಅಗತ್ಯವಿರುವ ಮಾನವ ಸಂಪನ್ಮೂಲದ ಬಗ್ಗೆ ಬೇಡಿಕೆ ಇಡಬಹುದು. ಅದರನ್ವಯ ಉದ್ಯೋಗಾಕಾಂಕ್ಷಿಗಳು ತಮ್ಮ ವಿದ್ಯಾರ್ಹತೆ, ಕೌಶಲಕ್ಕೆ ಅನುಗುಣವಾಗಿ ಅರ್ಜಿ ಸಲ್ಲಿಸಬಹುದು. ಉದ್ಯೋಗದ ಬೇಡಿಕೆಗೆ ಅನುಗುಣವಾಗಿ ತಂತ್ರಾಂಶ ಬಳಸಿ ಉದ್ಯೋಗಿಗಳನ್ನು ಪೋರ್ಟಲ್ ಹೊಂದಾಣಿಕೆ ಮಾಡಲಿದೆ. ಈ ಪೋರ್ಟಲ್ ಮೂಲಕ ಕಂಪನಿಗಳು ಕೂಡ ಆಕಾಂಕ್ಷಿಗಳ ಮಾಹಿತಿ ನೋಡಬಹುದು. ತಮಗೆ ಸೂಕ್ತ ಎನಿಸಿದರೆ ನೇರ ಸಂದರ್ಶನಕ್ಕೆ ಕರೆಯಬಹುದು. ಇಲ್ಲವೇ ತಮಗೆ ಅಗತ್ಯವಾದ ಮಾನವ ಸಂಪನ್ಮೂಲದ ಬಗ್ಗೆ ಕೌಶಲಾಭಿವೃದ್ಧಿ ನಿಗಮಕ್ಕೆ ಕೋರಿಕೆ ಸಲ್ಲಿಸಬಹುದು. https://skillconnect.kaushalkar.com/ ಸಂಪರ್ಕಿಸಬಹುದು.
ಪೋರ್ಟಲ್ ವೈಶಿಷ್ಟ್ಯಗಳು
1. ಎಲ್ಲೆಲ್ಲಿ ಉದ್ಯೋಗಾವಕಾಶಗಳು ಇವೆ, ಯಾರಿಗೆ ಕೆಲಸದ ಅಗತ್ಯವಿದೆ ಎಂಬ ಮಾಹಿತಿ ಇಲ್ಲಿ ಲಭ್ಯ.
2. ಲಭ್ಯ ಉದ್ಯೋಗಗಳಿಗೆ ಅಗತ್ಯವಾದ ತರಬೇತಿ ನೀಡಿ ಅಭ್ಯರ್ಥಿಗಳನ್ನು ಕೌಶಲಗೊಳಿಸಿ ಸಂಬಂಧಿತ ಕಂಪನಿಗೆ ಕಳಿಸಲಾಗುತ್ತದೆ.
3. ಪೋರ್ಟಲ್​ನಲ್ಲಿ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳಿಗೆ ಖಚಿತವಾಗಿ ಕೆಲಸ ಸಿಗುತ್ತದೆ.
4. ಕಂಪನಿಗಳಿಗೂ ಈ ಮೂಲಕ ಗುಣಮಟ್ಟದ ಕೌಶಲ ಪೂರ್ಣ ಮಾನವ ಸಂಪನ್ಮೂಲ ದೊರೆಯುತ್ತದೆ.
5. ಸರ್ಕಾರ ಕಂಪನಿಗಳ ಜತೆ ಒಪ್ಪಂದ ಮಾಡಿಕೊಂಡು, ಅವರ ಬೇಡಿಕೆಗೆ ತಕ್ಕಂತೆ ತರಬೇತಿ ನೀಡಿ ಕಳಿಸುವುದು.
ಶಾಲೆ- ಕಾಲೇಜು ಜು.31ರ ವರೆಗೂ ಬಂದ್​; ಆನ್​ಲೈನ್​ ಶಿಕ್ಷಣಕ್ಕೆ ಪ್ರೋತ್ಸಾಹ; ಕೇಂದ್ರ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + thirteen =
Remember me
