ಬೆಂಗಳೂರು:ಪ್ರಸಿದ್ಧ ಉದ್ಯಮಿ, ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರ ಹೆಸರಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ವಿಶ್ವದರ್ಶನ ಎಜುಕೇಶನ್ ಸೊಸೈಟಿಯಲ್ಲಿ ಮೀಡಿಯಾ ಸ್ಕೂಲ್ ಸ್ಥಾಪನೆಯಾಗಿದ್ದು, ಶೀಘ್ರದಲ್ಲಿ ಕಾರ್ಯಾರಂಭಿಸಲಿದೆ. ಪ್ರವೇಶಾತಿಗಾಗಿ ವ್ಯಾಪಕ ಸ್ಪಂದನೆ ವ್ಯಕ್ತವಾಗುತ್ತಿದ್ದು, ವಿದ್ಯಾರ್ಥಿಗಳ ಬೇಡಿಕೆ ಮೇರೆಗೆ ಆನ್​ಲೈನ್ ನೋಂದಣಿಗೂ ಅವಕಾಶ ಕಲ್ಪಿಸಲಾಗಿದೆ.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಒಂದು ವರ್ಷದ ಪಿಜಿ ಡಿಪ್ಲೊಮಾ ಕೋರ್ಸ್ ಇದಾಗಿದ್ದು, ಕರ್ನಾಟಕ ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿದೆ. ಮುದ್ರಣ, ಡಿಜಿಟಲ್ ಹಾಗೂ ಟಿವಿ ಮಾಧ್ಯಮಗಳಲ್ಲಿ ವೃತ್ತಿ ಪರವಾಗಿ ಕಾರ್ಯನಿರ್ವಹಿಸುವ ರೀತಿಯಲ್ಲಿ ಬೋಧನೆ ಮತ್ತು ತರಬೇತಿ ಇರಲಿದೆ. ಪ್ರಾಯೋಗಿಕ ಕಲಿಕೆಗೆ ಒತ್ತು ನೀಡ ಲಾಗುತ್ತದೆ ಎಂದು ವಿಶ್ವದರ್ಶನ ಎಜುಕೇಶನ್ ಸೊಸೈಟಿ ಅಧ್ಯಕ್ಷ, ಹಿರಿಯ ಪತ್ರಕರ್ತ ಹರಿಪ್ರಕಾಶ ಕೋಣೆಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸದ್ಯ ಪದವಿ ಪೂರೈಸಿರುವವರು ಅಥವಾ ಅಂತಿಮ ಪದವಿ ಪರೀಕ್ಷೆ ಬರೆದವರು/ಬರೆಯುತ್ತಿರುವವರು ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು, ಅ.4ರವರೆಗೆ ಅವಕಾಶವಿದೆ. ಅ. 6ರಂದು ಪ್ರವೇಶ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಯಲ್ಲಾಪುರದ ವಿಶ್ವದರ್ಶನ ಎಜುಕೇಶನ್ ಸೊಸೈಟಿಗೆ ಖುದ್ದಾಗಿ ಬಂದು ಸಹ ಅರ್ಜಿ ಸಲ್ಲಿಸಬಹುದು. ವೃತ್ತಿಪರ ಬೋಧಕ ವರ್ಗದ ಜತೆಗೆ, ನುರಿತ ಪತ್ರಕರ್ತರಿಂದಲೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ತರಬೇತಿ ದೊರೆಯಲಿದೆ. ವಿವರಗಳಿಗೆ ಮೀಡಿಯಾ ಸ್ಕೂಲ್ ಪ್ರಾಂಶುಪಾಲ ನಾಗರಾಜ ಇಳೆಗುಂಡಿ (ಮೊ.ಸಂ.: 8884432196) ಅಥವಾ ವಿಶ್ವದರ್ಶನ ಎಜುಕೇಶನ್ ಸೊಸೈಟಿ ಸಿಇಒ ಅಜಯ್ ಭಾರತೀಯ (ಮೊ.ಸಂ.: 8904134073) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಈ ಲಿಂಕ್ ಬಳಸಿ ಆನ್​ಲೈನ್ ರಿಜಿಸ್ಟ್ರೇಶನ್ ಮಾಡಿಕೊಳ್ಳಬಹುದು:https://forms.gle/LLEQaevE5PRDfKdA7
ಇಬ್ಬರು ಮಹಿಳಾ ಕಾನ್​ಸ್ಟೆಬಲ್​ಗಳಿಗೆ ಠಾಣೆಯಲ್ಲೇ ಶಾಸ್ತ್ರೋಕ್ತ ಸೀಮಂತ!

ಮಾಜಿ ಪ್ರಧಾನಿ ದೇವೇಗೌಡ, ಇಸ್ರೋ ಸೋಮನಾಥ್​ಗೆ ಗೌರವ ಡಾಕ್ಟರೇಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 19 =
Remember me
