ಉಡುಪಿ:ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಅಪಾರ ಶ್ರಮವಹಿಸಿ, ಮುಖ್ಯಮಂತ್ರಿಯಾಗಿ ಆಡಳಿತ ಚುಕ್ಕಾಣಿಯನ್ನೂ ಹಿಡಿದು, ಪ್ರವಾಹ-ಕರೊನಾ ಸಂಕಷ್ಟಗಳನ್ನು ಸಮರ್ಥವಾಗಿ ಎದುರಿಸಿ ಇಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಮಾತನಾಡಿದ ಬಿ.ಎಸ್​. ಯಡಿಯೂರಪ್ಪ ಅವರು, ಗದ್ಗದಿತರಾಗಿ ಕಣ್ಣೀರು ಹಾಕಿದ ಪ್ರಸಂಗವೂ ನಡೆದಿದೆ. ಆದರೆ ಅವರ ಕಣ್ಣೀರಿನ ಕುರಿತು ಉಡುಪಿ ಶಾಸಕ ರಘುಪತಿ ಭಟ್​ ಬೇರೆಯದೇ ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ.
ಯಡಿಯೂರಪ್ಪ ರಾಜೀನಾಮೆ ನೀಡಿರುವ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಯಡಿಯೂರಪ್ಪ ಅವರು ಯಾವುದೇ ಒತ್ತಡದಿಂದ ರಾಜೀನಾಮೆ ಕೊಟ್ಟಿಲ್ಲ. ಪಕ್ಷದ ಸಿದ್ಧಾಂತವನ್ನು ಒಪ್ಪಿ ಸಂತೋಷದಿಂದಲೇ ರಾಜೀನಾಮೆ ನೀಡಿದ್ದಾರೆ ಎಂದಿದ್ದು, ಮಾತ್ರವಲ್ಲದೆ ಅವರು ಕಣ್ಣೀರು ಹಾಕಿದ್ದರ ಕುರಿತು ಸಮರ್ಥನೆಯನ್ನೂ ನೀಡಿದ್ದಾರೆ.
ಯಡಿಯೂರಪ್ಪ ಅವರಿಗೆ ಕಣ್ಣೀರು ಬಂದಿರುವುದು ಸ್ವಾಭಾವಿಕ. ಭಾವನಾತ್ಮಕ ಜೀವಿಗಳಿಗೆ ಕಣ್ಣೀರು ಬರುತ್ತದೆ. ಭಾವನೆ ಇಲ್ಲದ ಕಠೋರ ಮನಸ್ಸಿನವರಿಗೆ, ಕೇವಲ ವ್ಯವಹಾರ ನಡೆಸುವವರಿಗೆ ಕಣ್ಣೀರು ಬರುವುದಿಲ್ಲ ಎಂದಿರುವ ರಘುಪತಿ ಭಟ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಬ್ಬರೂ ಕಠೋರ ಮನಸ್ಸಿನವರು, ಆ ಇಬ್ಬರಿಗೆ ಕಣ್ಣೀರು ಬರುವುದಿಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಿಎಸ್​ವೈ ರಾಜೀನಾಮೆ: ಅಚ್ಚರಿ ಮೂಡಿಸಿದೆ ಕೇಂದ್ರ ನಾಯಕರ ಮೌನ!

ಸಾವಿರ ವರ್ಷಗಳ ಹಿಂದಿನ ಬೆಳವಣಿಗೆಯನ್ನು ನೆನಪಿಸಿದೆ ಬಿಎಸ್​ವೈ ರಾಜೀನಾಮೆ: ಸತೀಶ್​ ಜಾರಕಿಹೊಳಿ

ಇದು ಕಿಕ್ಕಿಳಿಸೋ ವಿಷಯ: ರಾಷ್ಟ್ರೀಯ-ರಾಜ್ಯ ಹೆದ್ದಾರಿ ಬಳಿ ಮದ್ಯದಂಗಡಿಗೆ ಪರವಾನಗಿ ಕೊಡಬೇಡಿ ಎಂದ ಸುಪ್ರೀಂ ಕೋರ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + eight =
Remember me
