ಬೆಂಗಳೂರು:ಕರೊನಾ ಲಾಕ್​ಡೌನ್ ಪರಿಣಾಮ ಮದ್ಯವ್ಯಸನಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಏ.14ರ ಬಳಿಕ ರಾಜ್ಯದಲ್ಲಿ ಮದ್ಯದಂಗಡಿ ತೆರೆಯಲು ವಿನಾಯಿತಿ ನೀಡುವ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಕರೊನಾ ಬಾಧಿತ ಜಿಲ್ಲೆಗಳಲ್ಲಿ ದಿನಕ್ಕೆ ಇಂತಿಷ್ಟು ಸಮಯ ನಿಗದಿ ಹಾಗೂ ಉಳಿದ ಜಿಲ್ಲೆಗಳಲ್ಲಿ ದಿನ ಪೂರ್ತಿ ತೆರೆಯಲು ಅನುಮತಿ ನೀಡುವ ಬಗ್ಗೆ ಚಿಂತನೆ ನಡೆದಿದೆ.
ರಾಜ್ಯದಲ್ಲಿ 3,920 ಚಿಲ್ಲರೆ ಅಂಗಡಿ (ಸಿಎಲ್-2), 228 ಕ್ಲಬ್(ಸಿಎಲ್-4), 72 ಸ್ಟಾರ್ ಹೋಟೆಲ್ (ಸಿಎಲ್-ಎ), 981 ಹೋಟೆಲ್ ಮತ್ತು ವಸತಿ ಗೃಹ (ಸಿಎಲ್-7), 3,476 ಬಾರ್ ಆಂಡ್ ರೆಸ್ಟೋರೆಂಟ್ (ಸಿಎಲ್-9), 624 ಎಂಎಸ್​ಐಎಲ್ (ಸಿಎಲ್-11ಸಿ), 449 ರಿಟೈಲ್, 438 ಇತರೆ ಸೇರಿ ಒಟ್ಟು 10,188 ಮದ್ಯ ಮಾರಾಟ ಕೇಂದ್ರಗಳಿವೆ. ಬೆಂಗಳೂರು, ಬೆಂ. ಗ್ರಾಮಾಂತರ, ಮೈಸೂರು, ಚಿಕ್ಕಬಳ್ಳಾಪುರ, ದ. ಕನ್ನಡ, ಉತ್ತರ ಕನ್ನಡ, ಕಲಬುರಗಿ, ಬೆಳಗಾವಿ, ಉಡುಪಿ, ಬಳ್ಳಾರಿ, ದಾವಣಗೆರೆ, ಬಾಗಲಕೋಟೆ, ಧಾರವಾಡ, ಮಂಡ್ಯ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮದ್ಯದಂಗಡಿಗಳನ್ನು ತೆರೆಯಲು ದಿನಕ್ಕೆ ಇಂತಿಷ್ಟೇ ಸಮಯ ನಿಗದಿಯಾಗುವ ಸಾಧ್ಯತೆ ಇದೆ.
ಅರ್ಜಿದಾರರು ವಾದ ಮಂಡಿಸಿ, ಲಾಕ್​ಡೌನ್​ನಿಂದಾಗಿ ಮದ್ಯದಂಗಡಿಗಳು ಮುಚ್ಚಿರುವ ಕಾರಣ ಮದ್ಯ ಸಿಗದೆ ರಾಜ್ಯದಲ್ಲಿ 7 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಆ 7 ಮಂದಿ ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಕ್ಕೆ ನಿಮ್ಮ ಬಳಿ ಏನು ದಾಖಲೆ ಇದೆ ಎಂದು ಕೇಳಿದ ಪೀಠ, ಗಂಭೀರ ಪರಿಸ್ಥಿತಿಯ ನಡುವೆ ಮದ್ಯದಂಗಡಿ ತೆರೆಯಲು ಅನುಮತಿ ಕೋರಿ ಅರ್ಜಿ ಸಲ್ಲಿಸಿ ಕೋರ್ಟ್ ಸಮಯವನ್ನೂ ವ್ಯರ್ಥ ಮಾಡಿದ್ದೀರಿ. ಆದ್ದರಿಂದ, ಭಾರಿ ದಂಡ ವಿಧಿಸಬೇಕಾಗುತ್ತದೆ. ಅದು 10 ಸಾವಿರದಿಂದ 10 ಲಕ್ಷ ರೂ. ಆಗಬಹುದು. ಎಷ್ಟು ದಂಡ ಪಾವತಿಸುತ್ತೀರಿ ಎಂದು ಅರ್ಜಿದಾರರನ್ನು ಪ್ರಶ್ನಿಸಿತು.
ಅರ್ಜಿ ಹಿಂಪಡೆಯುವುದಾಗಿ ಅರ್ಜಿದಾರರು ತಿಳಿಸಿದರೂ ಅದಕ್ಕೆ ನ್ಯಾಯಾಲಯ ಒಪ್ಪದ ಹಿನ್ನೆಲೆಯಲ್ಲಿ 10 ಸಾವಿರ ದಂಡ ಪಾವತಿಸುವುದಾಗಿ ಅರ್ಜಿದಾರರು ತಿಳಿಸಿದರು. ದಂಡದ ಮೊತ್ತವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಪಾವತಿಸುವಂತೆ ಸೂಚಿಸಿ, ಪಿಐಎಲ್ ವಜಾಗೊಳಿಸಿತು.
ಅರ್ಜಿದಾರರ ಮನವಿ ಏನು?
ಮದ್ಯಪಾನದ ಚಟ ಇರುವವರಿಗೆ ಮದ್ಯ ಸಿಗದಿದ್ದರೆ ನಡುಕ, ಭ್ರಮೆ, ನಿದ್ರಾಹೀನತೆ, ಮೂರ್ಛೆ ರೋಗದಂಥ ಕಾಯಿಲೆಗಳು ಬರುವ ಸಾಧ್ಯತೆಯಿರುತ್ತದೆ. ಮಾನಸಿಕ ಖಿನ್ನತೆಯಿಂದ ಮತ್ತೊಬ್ಬರ ಜೀವಕ್ಕೆ ಅಪಾಯವೆಸಗಬಹುದು ಅಥವಾ ಆತ್ಮಹತ್ಯೆಗೂ ಯತ್ನಿಸಬಹುದು. ಆದ್ದರಿಂದ ದಿನದ ಕೆಲ ಗಂಟೆಗಳ ಸೀಮಿತ ಅವಧಿಗೆ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಬೇಲೂರು ಹರೀಶ
ಲಾಕ್​ಡೌನ್​ ಹಿನ್ನೆಲೆಯಲ್ಲಿ ಅಭಿಮಾನಿಗಳಿಗಾಗಿ “ಕೆಜಿಎಫ್​​’ ಚಿತ್ರದ ಹೊಸ ಟ್ಯೂನ್​ ಬಿಡುಗಡೆ; ಹಾಗಾದರೆ ನೀವಿನ್ನೂ ಕೇಳಿಲ್ವಾ?’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
