ಬೆಂಗಳೂರುರಾಜ್ಯಾದ್ಯಂತ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮೇ 29 ಮತ್ತು 30ರಂದು ಶಾಲಾ ಪ್ರಾರಂಭೋತ್ಸವದ ಸಿದ್ಧತೆಗಳನ್ನು ಮಾಡಿಕೊಂಡು ಮೇ 31ರಂದು ಶಾಲಾ ಪ್ರಾರಂಭೋತ್ಸವ ಮಾಡುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲ್ಲೂಕು ಹಂತದಲ್ಲಿ ಸಿಆರ್‌ಪಿ, ಬಿಆರ್‌ಪಿ ಹಾಗೂ ಶಾಲಾ ಮುಖ್ಯ ಶಿಕ್ಷಕರ ಸಭೆ ನಡೆಸಿ ಶಾಲೆ ಪ್ರಾರಂಭದ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಕ್ರಮ ವಹಿಸುವಂತೆ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.
ಶಾಲಾ ಸ್ವಚ್ಛತಾ ಕಾರ್ಯ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು. ತರಗತಿ/ಸಿಬ್ಬಂದಿ ಕೊಠಡಿ, ಶಾಲಾ ಮೈದಾನ, ನೀರಿನ ಟ್ಯಾಂಕ್, ಅಡುಗೆ ಕೋಣೆ, ಆಹಾರ ಧಾನ್ಯಗಳ ಸ್ವಚ್ಛತೆ ಮತ್ತು ಅಡುಗೆ ಪರಿಕರಗಳನ್ನು ಸ್ವಚ್ಛಗೊಳಿಸುವಂತೆ ತಿಳಿಸಿದ್ದಾರೆ.
ಮೇ 29ರಂದು ಶಿಕ್ಷಕರು ವರ್ಷದ ಶೈಕ್ಷಣಿಕ ಚಟುವಟಿಕೆಗಳ ಕುರಿತು ಶಾಲಾ, ತರಗತಿ, ಶಿಕ್ಷಕರ ವೇಳಾಪಟ್ಟಿ, ವಾರ್ಷಿಕ ಕ್ರಿಯಾ ಯೋಜನೆ, ಶಿಕ್ಷಕರು ಪಾಠ ಯೋಜನೆ ತಯಾರಿಸಿಕೊಳ್ಳುವುದು. ಶಾಲಾಭಿವೃದ್ಧಿ ಯೋಜನೆ, ಶಾಲೆ ಬಿಟ್ಟಿರುವ ಮಕ್ಕಳನ್ನು ಗುರುತಿಸಿ ವಿಶೇಷ ದಾಖಲಾತಿ ಮಾಡಿಕೊಳ್ಳಲು ಜಾಥಾ, ಪ್ರಭಾತ್ ಪೇರಿ, ಮನೆ ಭೇಟಿ ಮುಂತಾದ ಕ್ರಮಗಳನ್ನು ಹಮ್ಮಿಕೊಳ್ಳುವುದು.
ಮೇ 31ರಂದು ಮಕ್ಕಳಿಗೆ ಸಿಹಿ ಊಟ ವಿತರಿಸಿ ಪ್ರಾರಂಭೋತ್ಸವ ಮಾಡಬೇಕು. ಶಾಲಾರಂಭದ ದಿನವೇ ಉಚಿತ ಪಠ್ಯಪುಸ್ತಕ ಮತ್ತು ಸಮವಸಗಳನ್ನು ವಿತರಿಸಬೇಕು. ಜೂ.1ರಿಂದ 30ರವರೆಗೆ ಸೇತುಬಂಧ ಕಾರ್ಯಕ್ರಮ ನಡೆಸಬೇಕು ಎಂದು ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
