ಬೆಂಗಳೂರು: ಕರೊನಾ ಹಿನ್ನೆಲೆಯಲ್ಲಿ ಮದುವೆ ಸಮಾರಂಭಗಳಲ್ಲಿ 50ಕ್ಕಿಂತ ಹೆಚ್ಚು ಜನ ಪಾಲ್ಗೊಳ್ಳುವಂತಿಲ್ಲ ಎಂಬ ನಿಯಮ ತಮ್ಮ ವ್ಯವಹಾರಕ್ಕೆ ತೀವ್ರ ಅಡಚಣೆ ಉಂಟು ಮಾಡಿದ್ದು, ಈ ಸಂಖ್ಯೆಯನ್ನು 250ಕ್ಕೆ ಹೆಚ್ಚಿಸಬೇಕು ಎಂದು ಕರ್ನಾಟಕ ಮ್ಯಾರೇಜ್ ಹಾಲ್ಸ್ ವೆಲ್‌ಫೇರ್ ಅಸೋಸಿಯೇಷನ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಅಸೋಸಿಯೇಷನ್ ಪದಾಧಿಕಾರಿಗಳು, ‘‘ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಿಯೂ 250 ಜನರ ಉಪಸ್ಥಿತಿಗೆ ಅವಕಾಶ ಮಾಡಿಕೊಡಬಹುದಾದಷ್ಟು ದೊಡ್ಡ ಕಲ್ಯಾಣ ಮಂಟಪಗಳು ರಾಜ್ಯದಲ್ಲಿವೆ. ಆದರೂ ಸರ್ಕಾರ 50 ಜನರಿಗೆ ಮಾತ್ರ ಅವಕಾಶ ನೀಡಿರುವುದು ಸರಿಯಲ್ಲ. ಕಲ್ಯಾಣಮಂಟಪಗಳ ಗಾತ್ರ ಆಧರಿಸಿ ಸಂಖ್ಯೆಯನ್ನು ನಿಗದಿಪಡಿಸಬೇಕು’’ ಎಂದು ಆಗ್ರಹಿಸಿದರು.
ಇದನ್ನೂ ಓದಿಕೊಂಬಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎತ್ತಿಗೆ ಯಶಸ್ವಿ ಚಿಕಿತ್ಸೆ
‘‘ಕೇವಲ 50 ಜನರಿಗೆ ಅವಕಾಶ ನೀಡುತ್ತಿರುವ ಕಾರಣ ಜನರು ಮದುವೆಗಳನ್ನು ಅನಿರ್ದಿಷ್ಟ ಕಾಲ ಮುಂದೂಡುತ್ತಿದ್ದಾರೆ. ಇದರಿಂದಾಗಿ ಈ ಕ್ಷೇತ್ರವನ್ನೇ ನಂಬಿಕೊಂಡಿರುವ ಸಾವಿರಾರು ಜನ ಸಂಕಷ್ಟಕ್ಕೆ ಈಡಾಗಿದ್ದಾರೆ. ಇದನ್ನೇ ನಂಬಿಕೊಂಡಿರುವ ಬ್ಯೂಟಿಷಿಯನ್ಸ್, ವಿಡಿಯೋಗ್ರಾಫರ್, ಫೋಟೋಗ್ರಾಫರ್, ಲೈಟಿಂಗ್, ಶಾಮಿಯಾನ, ಕಾರ್ಡ್ ಮುದ್ರಕರು, ಮೇಕಪ್, ತರಕಾರಿ-ಹೂ ಬೆಳೆಗಾರರು, ಕೇಟರಿಂಗ್ ಮುಂತಾದವರೂ ಕೆಲಸವಿಲ್ಲದೆ ಕಷ್ಟಕ್ಕೆ ಸಿಲುಕಿದ್ದಾರೆ’’ ಎಂದು ವಿವರಿಸಿದರು.
ಮ್ಯಾರೇಜ್ ಹಾಲ್ ಉದ್ಯಮವೂ ಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೆ ಅಡಿ ಬರುವುದರಿಂದ ಎಂಎಸ್‌ಎಂಇಗಳಿಗೆ ಸಿಗುವ ವಿನಾಯಿತಿಗಳನ್ನು ಇದಕ್ಕೂ ವಿಸ್ತರಿಸಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರದ ನಿಯಮಗಳನ್ನು ಆಧರಿಸಿ ಶೀಘ್ರವೇ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದರು.
ಮಹಿಳಾ ಪೊಲೀಸ್‌ಗೇ ಕಿರುಕುಳ: ಮಾಜಿ ಪ್ರಿಯಕರ ಅಂದರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
