ಬೆಂಗಳೂರು: ಕರ್ನಾಟಕದಲ್ಲಿ ಮುಂಬರುವ ದಿನದಲ್ಲಿ ರೈಲ್ವೆ ಇಲಾಖೆಗೆ ಸಂಬಂಧಿಸಿದ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸುವಂತೆ ಆದೇಶ ಹೊರಡಿಸಲು ಸೂಚಿಸಲಾಗಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು.
ನೈಋತ್ಯ ರೈಲ್ವೆ ಬೆಂಗಳೂರು ವಿಭಾಗೀಯ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ತುಮಕೂರು ಜಿಲ್ಲೆ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದರು.
ನೈಋತ್ಯ ರೈಲ್ವೆ ವಲಯದ ಲೋಕೋ ಪೈಲಟ್​ ಹುದ್ದೆಗಳ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡುವಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿನಂತಿಸಿದ್ದರು. ಇದಕ್ಕೆ ಸ್ಪಂದಿಸಿರುವ ರೈಲ್ವೆ ಇಲಾಖೆ, ನೈಋತ್ಯ ರೈಲ್ವೆ ವಲಯದ ಲೋಕೋ ಪೈಲಟ್​ ಹುದ್ದೆಗಳ ಪರೀಕ್ಷೆ ಮುಂದೂಡಿ, ಕನ್ನಡದಲ್ಲಿ ಬರೆಯಲು ಅವಕಾಶ ನೀಡಿದೆ. ಇದಕ್ಕೆ ಸಂಬಂಧಿಸಿದ ಆದೇಶ ಶೀಘ್ರದಲ್ಲಿ ಹೊರಬರಲಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + fourteen =
Remember me
