ಬಾಗಲಕೋಟೆ:ಭಗವಾನ್ ಬಾಹುಬಲಿಗೆ ಅವಹೇಳನ ಮಾಡುವ ರೀತಿಯಲ್ಲಿ ಮಾತನಾಡಿದ್ದ ಜೆಡಿಎಸ್​ ಮುಖಂಡ ಅಯೂಬ್​ ಖಾನ್​, ನಟ ಪ್ರಥಮ್ ಹಾಗೂ ಪ್ರಕಾಶ್ ಸುಡಾಳ ವಿರುದ್ಧ ಜೈನ ಸಮುದಾಯದವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಷ್ಟೇ ಅಲ್ಲದೆ, ಪ್ರತಿಭಟನೆಯನ್ನೂ ಕೈಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ಪ್ರತಿಭಟನೆ ಮಾಡುವ ಜತೆಗೆ ಬಹಿರಂಗ ಸಭೆಯನ್ನು ಆಯೋಜಿಸಿರುವ ಜೈನ ಸಮುದಾಯದವರು, ಅಯೂಬ್​ ಖಾನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಮತ್ತೊಂದು ವೃದ್ಧ ದಂಪತಿಯ ಬರ್ಬರ ಕೊಲೆ: ಇಲ್ಲೂ ಬೇರೆ ಬೇರೆ ಕೋಣೆಗಳಲ್ಲಿ ಹತ್ಯೆ!
ಪಟ್ಟಣದ ಮಹಾವೀರ ವೃತ್ತದಿಂದ ಮಾರುಕಟ್ಟೆ, ಗುಮ್ಮಟಗಲ್ಲಿ ಮೂಲಕ ತಹಸೀಲ್ದಾರ್ ಕಚೇರಿವರೆಗೂ ಮೆರವಣಿಗೆಯಲ್ಲಿ ತೆರಳಿ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಸಭೆ ನಡೆಸಿದರು. ಜೈನ ಸಮುದಾಯಕ್ಕೆ ಅಪಮಾನ ಮಾಡಿರುವ ಆರೋಪಿಗಳ ವಿರುದ್ದ ಎಫ್​ಐಆರ್​ ದಾಖಲಿಸುವಂತೆ ಆಗ್ರಹಿಸಿದರು.
ಇದನ್ನೂ ಓದಿ:ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!
ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ, ತೇರದಾಳ ಭಾಗದ ಜೈನ ಸಮುದಾಯದವರು ಪ್ರತಿಭಟನೆಯಲ್ಲಿದ್ದರು. ತ್ಯಾಗಮೂರ್ತಿ ಭಗವಾನ್ ಬಾಹುಬಲಿಗೆ ಅಪಮಾನ ಮಾಡಿ ಜೈನ ಸಮಾಜದವರ ಭಾವನೆಗೆ ಧಕ್ಕೆ ತಂದಿದ್ದಾರೆ. ಮೈಸೂರಿನ ಅಯೂಬ್ ಖಾನ್, ಬೆಂಗಳೂರಿನ ಪ್ರಥಮ್​ ಹಾಗೂ ಪ್ರಕಾಶ್ ಸುಡಾಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಮತ್ತೊಂದು ಶಾಲೆಯಲ್ಲೂ ನಮಾಜ್; ಹಿಜಾಬ್ ಧರಿಸಿ ನಮಾಜ್ ಮಾಡಿದ ವಿದ್ಯಾರ್ಥಿನಿಯರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
