ಬೆಂಗಳೂರು:ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ನಾಯಕರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಸಂಕ್ರಾಂತಿಯ ಶುಭ ಕೋರಿ ರಾಜಕೀಯ ಸಮಾಲೋಚನೆ ನಡೆಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ದಂಡೇ ದೇವೇಗೌಡ ಹಾಗೂ ಕುಮಾರಸ್ವಾಮಿ ಮನೆಗೆ ಎಡತಾಕುತ್ತಿದ್ದಾರೆ. ಒಬ್ಬರ ಮೇಲೊಬ್ಬರಂತೆ ಭೇಟಿ ನೀಡುತ್ತಿದ್ದಾರೆ.
ಭಾನುವಾರ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರಲ್ಲದೆ ರಾಜಕೀಯ ಚರ್ಚೆಯನ್ನೂ ಮಾಡಿದರು ಎಂದು ಮೂಲಗಳು ತಿಳಿಸಿವೆ.
ಲೋಕಸಭೆ ಚುನಾವಣೆಯಲ್ಲಿ ಪಕ್ಷಗಳ ನಾಯಕರು ಹಾಗೂ ಕಾರ್ಯಕರ್ತರ ನಡುವಿನ ಹೊಂದಾಣಿಕೆ, ಉಭಯ ಪಕ್ಷಗಳ ಮುಖಂಡರನ್ನು ಒಳಗೊಂಡ ಸಮನ್ವಯ ಸಮಿತಿ ರಚನೆ, ಚುನಾವಣಾ ಕಾರ್ಯತಂತ್ರ, ಕಾಂಗ್ರೆಸ್ ವೈಲ್ಯಗಳನ್ನು ಜನರ ಮುಂದಿಟ್ಟು ಹೋರಾಟ ಮಾಡುವ ಕುರಿತು ಪರಸ್ಪರ ಚರ್ಚಿಸಿದರು ಎಂದು ಹೇಳಲಾಗಿದೆ.
ಗ್ಯಾರಂಟಿಗಳ ವೈಲ್ಯಗಳ ವಿರುದ್ಧ ಹೋರಾಟದಲ್ಲಿ ಪರಸ್ಪರ ಕೈಜೋಡಿಸಲು ಮತ್ತು ತಳಮಟ್ಟದ ಕಾರ್ಯಕರ್ತರನ್ನು ಒಳಗೊಳಿಸಿಕೊಳ್ಳುವ ಕುರಿತು ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ.
ಸೀಟು ಹಂಚಿಕೆ ಸಂದರ್ಭದಲ್ಲಿ ರಾಜ್ಯ ನಾಯಕರು ಪರಸ್ಪರ ಅನುಸರಿಸಿಕೊಂಡು ಹೋಗುವಂತೆ, ಯಾವುದೇ ಗೊಂದಲ ಉಂಟಾಗದಂತೆ ಎಚ್ಚರ ವಹಿಸುವ ಕುರಿತು ದೇವೇಗೌಡರು ಬಿಜೆಪಿ ನಾಯಕರಿಗೆ ಕಿವಿ ಮಾತು ಹೇಳಿದರು ಎನ್ನಲಾಗಿದೆ. ಜೆಡಿಎಸ್ ಹಿರಿಯ ನಾಯಕ ಡಿ.ಸಿ.ತಮ್ಮಣ್ಣ ಉಪಸ್ಥಿತರಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − 10 =
Remember me
