
ಬೆಂಗಳೂರು:ಸಾಲ ಮನ್ನಾ ಆಸೆಗಾಗಿ ರೈತರು ಬರಗಾಲ ಬರಲಿ ಎಂದು ಆಶಿಸುತ್ತಾರೆ ಎಂದು ಸಚಿವ ಶಿವಾನಂದ ಪಾಟೀಲರು ಮತ್ತೊಮ್ಮೆ ರೈತರಿಗೆ ಅಪಮಾನ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.ರೈತರ ಆತ್ಮಹತ್ಯೆ ಹೆಚ್ಚಾಗುತ್ತಿರುವ ಬಗ್ಗೆ ಕೇಳಿದರೆ ಎಲ್ಲಿದೆ ಹೇಳಿ ಆತ್ಮಹತ್ಯೆ? ಸ್ವಂತಕ್ಕೆ ಯಾರಾದರೂ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ ಎಂದು ಉಪಮುಖ್ಯಮಂತ್ರಿಗಳು ಉಡಾಫೆ ಮಾತಾಡುತ್ತಾರೆ. ಈಗ ಸಚಿವರು ಪರಿಹಾರದ ಹಣಕ್ಕಾಗಿ ಬರ ಬರಲಿ ಎಂದು ರೈತರು ಆಸೆ ಪಡುತ್ತಾರೆ ಎಂದು ಹಗುರವಾಗಿ ಮಾತನಾಡುತ್ತಾರೆ. ಭೂತಾಯಿಯನ್ನೇ ನಂಬಿ ಬದುಕುವ ರೈತ ಮಳೆ ಇಲ್ಲದೆ ತನ್ನ ಭೂಮಿ ಬಂಜರಾಗಲಿ ಎಂದು ಎಂದಿಗೂ ಕೋರುವುದಿಲ್ಲ. ಮಣ್ಣನ್ನೇ ನೆಚ್ಚಿಕೊಂಡು ಬಾಳ್ವೆ ನಡೆಸುವ ರೈತ ಆ ಮಣ್ಣು ದಾಹದಿಂದ ಸೊರಗಲಿ ಎಂದು ಎಂದಿಗೂ ಆಸೆ ಪಡುವುದಿಲ್ಲ ಎಂದಿದ್ದಾರೆ.ಇಡೀ ಮನುಕುಲಕ್ಕೆ ಅನ್ನ ನೀಡುವ ರೈತ ತನ್ನ ಭೂಮಿ ಹಚ್ಚ-ಹಸಿರಾಗಿರಲಿ, ತಾನು ಬೆವರು ಸುರಿಸಿ ಬೆಳೆಸಿದ ಪೈರು ತನ್ನ ಎದೆ ಎತ್ತರಕ್ಕೆ ಬೆಳೆಯಲಿ, ಅದನ್ನು ನಾಲ್ಕು ಜನ ಉಣ್ಣಲಿ ಎಂದು ಆಶಿಸುತ್ತಾನೆಯೆ ಹೊರತು ಬರಗಾಲ ಬರಲಿ ಎಂದು ಕನಸು ಮನಸಿನಲ್ಲೂ ಯೋಚಿಸುವುದಿಲ್ಲ ಎಂದು ಹೇಳಿದ್ದಾರೆ.ಮುಖ್ಯಮಂತ್ರಿಗಳೇ, ತಮ್ಮ ಸರ್ಕಾರಕ್ಕೆ ಬರ ಪರಿಹಾರ ಕೊಡಲು ಯೋಗ್ಯತೆ ಇಲ್ಲದಿದ್ದರೆ, ರೈತರ ಕಣ್ಣೀರು ಒರೆಸುವ ಮನಸ್ಸಿಲ್ಲದಿದ್ದರೆ ಸುಮ್ಮನಿದ್ದು ಬಿಡಿ. ಆದರೆ ಅನ್ನದಾತ ರೈತರನ್ನ ಈ ರೀತಿ ಪದೇ ಪದೇ ಅವಮಾನಿಸಬೇಡಿ. ಈಗಾಗಲೇ ಸಂಕಷ್ಟದಲ್ಲಿರುವ ರೈತ ಬಾಂಧವರನ್ನು ಇನ್ನಷ್ಟು ನೋಯಿಸಬೇಡಿ ಎಂದು ತಮ್ಮ ಮಂತ್ರಿಗಳಿಗೆ ಬುದ್ಧಿ ಮಾತು ಹೇಳಿ ಎಂದು ಆಶೋಕ್ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
