ಬೆಂಗಳೂರು:ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜಂಟಿ ಸುದ್ದಿಗೊಷ್ಟಿ ನಡೆಸಿ ಮತ್ತೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಮಾಡುತ್ತಾ, ಸಚಿವ ಎಂ.ಟಿ.ಬಿ ನಾಗರಾಜ್ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಎಂ.ಟಿ.ಬಿ ನಾಗರಾಜ್ ಸೀನಿಯರ್ ಮೋಸ್ಟ್ ಮಿನಿಸ್ಟರ್. ನಮ್ಮ ಪಕ್ಷದಿಂದಲೇ ಹೋದ ಗಿರಾಕಿ ಎಂ.ಟಿ.ಬಿ. 70-80 ಲಕ್ಷ ಕೊಟ್ಟು ವರ್ಗಾವಣೆ ಅಂದ್ರೆ ಹೃದಯಾಘಾತ ಆಗದೇ ಇರುತ್ತದೆಯಾ ಎಂದು ಹೇಳಿದ್ದಾರೆ. ಬಿಜೆಪಿಯ 40% ವ್ಯವಹಾರಕ್ಕೆ ಇದಕ್ಕಿಂತ ದೊಡ್ಡ ಸಾಕ್ಷ್ಮಿ ಬೇಕಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಸಿ.ಎಂ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಇನ್ಸ್​​ಪೆಕ್ಟರ್ ನಂದೀಶ್ ಸಾವಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಜತೆಗೆ ವರ್ಗಾವಣೆ ಮಾಡಲು ಹನ ಪಡೆದಿದ್ದಾರೆ ಎಂಬ ಆರೋಪದ ಬಗ್ಗೆ ಸೂಕ್ತವಾದ ತನಿಖೆ ನಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದೆ. ಯಾವುದೇ ಒಂದು ಸಣ್ಣ ಕೆಲಸ ಆಗಬೇಕು ಎಂದುರೂ ಲಂಚ ಕೊಡಬೇಕಾದ ಪರಿಸ್ಥಿತಿ ಇದೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಪಿಎಸ್ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿಲ್ಲ ಎಂದು ಹೇಳಿದರು. ಹಾಗಾದರೆ ಎಡಿಜಿಪಿ ಅಮೃತ್ ಪೌಲ್ ಸುಮ್ಮನೆ ಜೈಲಿಗೆ ನೆಂಟಸ್ಥಿಕೆ ಬೆಳೆಸಲು ಹೋದರಾ? ಎಂದು ಪ್ರಶ್ನಿಸಿದ್ದಾರೆ.
ಪರೇಶ್ ಮೆಸ್ತಾ ಕೇಸ್​ನಲ್ಲಿ ಸಿಬಿಐ ಬಿ ರಿಪೋರ್ಟ್ ಕೊಟ್ಟಿದೆ. ಆದರೂ ಸಿದ್ದರಾಮಯ್ಯ ಸಾಕ್ಷಿ ನಾಶ ಮಾಡಿದರು ಎಂದು ಬಿಜೆಪಿಗರು ಆರೋಪ ಮಾಡುತ್ತಿದ್ದಾರೆ. ಸಿಬಿಐ ಅಮೀತ್ ಶಾ ವ್ಯಾಪ್ತಿಯಲ್ಲಿದೆ. ಹಾಗಾದರೆ ಸರಿಯಾಗಿ ತನಿಖೆ ಮಾಡದೆ ಇದ್ರೆ ಅದು ಅಮೀತ್ ಶಾ ವೈಪಲ್ಯ ಅಲ್ವಾ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 12 =
Remember me
