ಹುಬ್ಬಳ್ಳಿ:ಜುಲೈ 17-18ರಂದು ಬೆಂಗಳೂರಿನಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ಯಾವುದೇ ರಾಜಕೀಯ ಅರ್ಥವಿಲ್ಲ. ಮುಂದಿನ ದಿನಗಳಲ್ಲಿ ಈ ರೀತಿಯ ಹಲವು ಸಭೆಗಳು ನಡೆದರು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಸಿಎಂ ಬಸವರಾಜ​ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ​ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಸೋಲಿಸುವುದು ಬಿಟ್ಟರೆ ವಿಪಕ್ಷಗಳಿಗೆ ಬೇರೆ ಯಾವುದೇ ನಿರ್ದಿಷ್ಟ ಗುರಿಯನ್ನು ಹೊಂದಿಲ್ಲ ಎಂದು ಟೀಕಿಸಿದ್ದಾರೆ.
ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಗೆ ಯಾವುದೇ ಪ್ರಬಲ ವಿರೋಧ ಪಕ್ಷವಿಲ್ಲ. ಸಭೆಯಲ್ಲಿ ಪ್ರಾದೇಶಿಕ ಪಕ್ಷಗಳು ಭಾಗಿಯಾಗುವುದರಿಂದ ಇದರಿಂದ ಯಾವುದೇ ಉಪಯೋಗವಿಲ್ಲ ಮತ್ತು ಇದರಿಂದ ಯಾವರಿಗೂ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದಿದ್ದಾರೆ.
ಇದನ್ನೂ ಓದಿ:ಕಂಟೇನರ್​ಗಳ ನಡುವೆ ಭೀಕರ ಅಪಘಾತ; ಚಾಲಕ ಮೃತ್ಯು
ಪ್ರಧಾನಿ ಮೋದಿ ನೇತೃತ್ವದ ಆಡಳಿತದಲ್ಲಿ ರಾಷ್ಟ್ರ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಪ್ರಗತಿ ಸಾಧಿಸಿದೆ. ಕೋವಿಡ್​ ಸಂದರ್ಭದಲ್ಲಿ ಪ್ರಧಾನಿ ಮೋದಿ ದೇಶ ನಡೆಸಿದ ರೀತಿ ಅವರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ತಂದು ಕೊಟ್ಟಿದೆ. ದೇಶದ ಅಬೀವೃದ್ದಿ ಪ್ರಧಾನಿ ಮೋದಿ ಅವರಿಂದ ಮಾತ್ರ ಸಾಧ್ಯ ಎಂದು ಎಲ್ಲರಿಗೂ ತಿಳಿದಿದೆ.
ಮುಂದಿನ ದಿನಗಳಲ್ಲಿ ವಿರೋಧ ಪಕ್ಷಗಳ ಒಕ್ಕೂಟ ಈ ರೀತಿಯ ಹಲವು ಸಭೆಗಳು ನಡೆಸಿದ್ದರು ಸಹ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + thirteen =
Remember me
