ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲೆಡೆ ಸುರಿಯುತ್ತಿರುವ ಮಳೆ ಮುಂದಿನ ಎರಡು ದಿನ ಮುಂದುವರಿಯಲಿದೆ. ಗದಗ, ಕೊಪ್ಪಳದ ಗಂಗಾವತಿ, ಶಿವಮೊಗ್ಗದ ಆಗುಂಬೆ, ದಾವಣಗೆರೆ, ದಕ್ಷಿಣ ಕನ್ನಡದ ಮಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಗುರುವಾರ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗದಲ್ಲಿ ಆ.16ರಿಂದ ಮುಂದಿನ ಎರಡು ದಿನ ಭಾರಿ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್​ ಅರ್ಲಟ್​ ಘೋಷಿಸಿದೆ.ಪ್ರತಿ ಗಂಟೆಗೆ 55 ಕಿ.ಮೀ.ವೇಗದಲ್ಲಿ ಬೀಸುವ ಬಿರುಗಾಳಿಯು ಕರಾವಳಿ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ, ಹಾಸನದಲ್ಲಿ ಮುಂದಿನ 24 ಗಂಟೆ ಕಾಲ ಮತ್ತು ಗದಗ, ಕೊಪ್ಪಳ, ಚಿತ್ರದುರ್ಗ, ಕೊಡಗು, ತುಮಕೂರು, ಮೈಸೂರಿನಲ್ಲಿ ಆ.17 ರಂದು ಯೆಲ್ಲೋ ಅರ್ಲಟ್​ ಇರಲಿದೆ.
ಹಾಸನ: ಸಾಲಭಾದೆ ತಾಳದೇ 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆ!
ಕೋಲಾರ, ಮಂಡ್ಯ, ರಾಮನಗರ, ವಿಜಯನಗರ, ಚಿಕ್ಕಬಳ್ಳಾಪುರ ಸೇರಿ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಉಳಿದ ಭಾಗಗಳಲ್ಲಿ ಸಾಧಾರಣ ವರ್ಷಧಾರೆಯಾಗಲಿದೆ.ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿ.ಸೆ ಮತ್ತು 22 ಡಿ.ಸೆ. ಇರಲಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen − sixteen =
Remember me
