ಬೆಂಗಳೂರು:ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಕರಾವಳಿ, ಮಲೆನಾಡಲ್ಲಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮುಂದುವರಿಯಲಿದೆ. ಚಿಕ್ಕಮಗಳೂರಿನ ಮೂಡಗೆರೆ, ಕೊಡಗಿನ ಗೋಣಿಕೊಪ್ಪ, ಶಿವಮೊಗ್ಗದ ಆಗುಂಬೆ, ಯಾದಗಿರಿ, ಕೊಪ್ಪಳದ ಗಂಗಾವತಿಯಲ್ಲಿ ಬಿರುಸಾಗಿ ವರ್ಷಧಾರೆಯಾಗಿದೆ. ಕೆಲವೆಡೆ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಆ.29ರಿಂದ ಸೆ.1 ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್​ ಅರ್ಲಟ್​ ಕೊಟ್ಟಿದೆ. ಬೆಳಗಾವಿ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಆ.29ರಂದು ಯೆಲ್ಲೋ ಅರ್ಲಟ್​ ಇರಲಿದೆ. ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗಲಿದೆ. ಆ.31ರಿಂದ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿ ಇರಲಿದೆ ಎಂದು ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ಅಕ್ಕಿ ಕೊಡ್ತೀನಿ ಅಂದ್ರೂ…. ಬರ್ತಿಲ್ಲ……….ದ.ಕ.ದಲ್ಲಿ ಮಳೆ ಇಳಿಕೆ:ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರದಲ್ಲಿ ಮುಂದಿನ ಮೂರು ದಿನ ಮಳೆ ಇಳಿಕೆಯಾಗಲಿದ್ದು, ಸೆ.1ರಿಂದ ಸೆ.2ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ ಮಾತನಾಡಿ, ಕರಾವಳಿ, ಮಲೆನಾಡಲ್ಲಿ ಮುಂದಿನ ದಿನಗಳಲ್ಲಿ ವರುರ್ಣಾಟ ಹೆಚ್ಚಾಗಲಿದೆ. ದಣ ಕರ್ನಾಟಕ ಭಾಗದಲ್ಲಿ ಅಷ್ಟೇನೂ ಮಳೆ ಬೀಳುವುದಿಲ್ಲ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆ.31ರಿಂದ ಮುಂಗಾರು ಚುರುಕು ಇರಲಿದೆ ಎಂದರು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:5 × one =
Remember me
