ಬೆಂಗಳೂರು:ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೆ ಸುಳಿಗಾಳಿ ಪರಿಣಾಮ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ವ್ಯಾಪ್ತಿಯ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಬಿರುಸಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಕೆಲವು ಭಾಗಗಳಲ್ಲಿ ಶನಿವಾರ ಸಾಧಾರಣ ವರ್ಷಧಾರೆಯಾಯಿತು.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆ.25ರಿಂದ ಆ.27ರವರೆಗೆ, ಬೆಳಗಾವಿ,ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ಶಿವಮೊಗ್ಗದಲ್ಲಿ ಆ.25ರಂದು ಭಾರಿ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಇಲಾಖೆ ಆರೆಂಜ್​ ಅರ್ಲಟ್​ ನೀಡಿದೆ. ರಾಯಚೂರು, ಬಾಗಲಕೋಟೆ, ಚಿಕ್ಕಮಗಳೂರಿನಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅರ್ಲಟ್​ ಇರಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರು, ವಿಜಯನಗರ,ಬೀದರ್​, ಗದಗ, ಧಾರವಾಡ, ಹಾವೇರಿ, ಕೊಪ್ಪಳದಲ್ಲಿ ಮುಂದಿನ 3 ದಿನ ಗುಡುಗು ಸಹಿತ ವರ್ಷಧಾರೆಯಾಗಲಿದೆ.
ರಾಜ್ಯದಲ್ಲಿ ಇಕೆವೈಸಿ ಪ್ರಕ್ರಿಯೆ ಮರು ಜಾರಿ: ಆಹಾರ ಇಲಾಖೆ ಸುತ್ತೋಲೆಗಾಳಿ ವೇಗ ಹೆಚ್ಚಳ:ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಜತೆಗೆ ಬಿಸಿಲು ಕಾಣಿಸಿಕೊಂಡಿದೆ. ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆ ಸುರಿಯುತ್ತಿದೆ. ಆದರೆ, ಮುರ್ನಾಲ್ಕು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೋರಾಗಿ ಗಾಳಿ ಬೀಸುತ್ತಿದ್ದು, ಕೃಷಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಕರಾವಳಿ ಭಾಗದಲ್ಲಿ ಪ್ರತಿ ಗಂಟೆಗೆ 65 ಕಿಮೀ ವರೆಗೆ ಗಾಳಿ ಬೀಸುತ್ತಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:12 − seven =
Remember me
