ಬೆಂಗಳೂರು:ನೈಋತ್ಯ ಮಾನ್ಸೂನ್​(ಮುಂಗಾರು ಮಾರುತ) ಆಗಮನಕ್ಕೆ ಕೆಲ ದಿನಗಳು ಬಾಕಿ ಇರುವಾಗಲೇ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಬಿರುಸು ಪಡೆದಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಿತ್ರದುರ್ಗದ ಹಿರಿಯೂರು, ಹಾಸನ, ಚಿಕ್ಕಮಗಳೂರಿನ ಮೂಡಗೆರೆ, ತುಮಕೂರಿನ ಚಿಕ್ಕನಾಯಕಳ್ಳಿ, ಕೊಡಗು, ಚಿಕ್ಕಬಳ್ಳಾಪುರ, ಬಾಗಲಕೋಟೆ ಸೇರಿ ರಾಜ್ಯದ ಹಲವೆಡೆ ಭಾನುವಾರ ಭರ್ಜರಿ ವರ್ಷಧಾರೆಯಾಗಿದೆ.
ದಕ್ಷಿಣ ಅಂಡಮಾನ್​ ಮತ್ತು ನಿಕೋಬಾರ್​ ದ್ವೀಪದಿಂದ ವಾಡಿಕೆಯಂತೆ ಮಾನ್ಸೂನ್​ ಭಾನುವಾರದಿಂದ ಆರಂಭವಾಗಿದೆ. ಮಾನ್ಸೂನ್​ ಮುನ್ನಡೆಯಲು ಪೂರಕ ವಾತಾವರಣ ಕಾಣಿಸಿಕೊಂಡಿದೆ. ಉಡುಪಿ, ದಕ್ಷಿಣ ಕನ್ನಡದಲ್ಲಿ ಮುಂದಿನ ಮೂರು ದಿನ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮೇ 20ರಿಂದ ಮೇ 24ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್​ ಅರ್ಲಟ್​ ಎಚ್ಚರಿಕೆ ಕೊಟ್ಟಿದೆ. ಉತ್ತರ ಕನ್ನಡ, ಬೆಂಗಳೂರು, ಬೆಂ.ಗ್ರಾಮಾಂತರ, ಮಂಡ್ಯ, ದಾವಣಗೆರೆ, ರಾಮನಗರ,ತುಮಕೂರಿನಲ್ಲಿ ಮೇ 20ರಂದು ಯೆಲ್ಲೋ ಅರ್ಲಟ್​ ಇರಲಿದೆ.
ಇರಾನ್ ಅಧ್ಯಕ್ಷರಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್ ಪತನ! ಸಚಿವರು ನೀಡಿದ ಮಾಹಿತಿ ಹೀಗಿದೆ
ಅಲೆಗಳ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸದಂತೆ ಮೀನುಗಾರರಿಗೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಬಿರುಗಾಳಿ,ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 2 =
Remember me
