ಬೆಂಗಳೂರುಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಇಲ್ಲಿಯವರೆಗೂ ನೇಮಕಾತಿ ಆದೇಶ ಪ್ರತಿ ಪಡೆಯದ ಅಭ್ಯರ್ಥಿಗಳು ಆದಷ್ಟು ಬೇಗ ನೇಮಕಾತಿ ಪತ್ರ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಪ್ರಕರಣವು ಸುಪ್ರೀಕೋರ್ಟ್‌ನಲ್ಲಿರುವ ಕಾರಣ ಜ.3ರಿಂದಲೇ ನೇಮಕಾತಿ ಆದೇಶ ಪ್ರತಿ ನೀಡುವುದನ್ನು ನಿಲ್ಲಿಸಲಾಗಿದೆ. ಕಳೆದು ಒಂದು ತಿಂಗಳಿನಿಂದ ವ್ಯರ್ಥವಾಗಿ ಸಮಯ ಹಾಳಾಗುತ್ತಿದೆ. ಪ್ರಕರಣ ವಿಚಾರಣೆಯು ಜ.22ರಂದು ನಡೆದಿದೆ. ನೇಮಕಾತಿಗೆ ಸಂಬಂಧಿಸಿದಂತೆ ಇದ್ದ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ತೆರವುಗೊಳಿಸಿದ್ದು, ಹಿಂದಿನ ನಿಯಮಗಳ ಪ್ರಕಾರ ನೇಮಕಾತಿ ಪ್ರಕ್ರಿಯೆ ಮುಂದುವರಿಸುವಂತೆ ಸೂಚನೆ ನೀಡಿದೆ. ವಿಚಾರಣೆ ನಡೆದು 14 ದಿನಗಳಾದರೂ ನೇಮಕಾತಿ ಮತ್ರ ನೀಡಲು ಇಲಾಖೆ ಅಧಿಕಾರಿಗಳು ಮಾತ್ರ ಸುಪ್ರೀಂಕೋರ್ಟ್‌ನತ್ತ ಬೆರಳು ತೋರಿಸುತ್ತಿದ್ದಾರೆ. ಆದ್ದರಿಂದ ಆದಷ್ಟು ಬೇಗ ನೇಮಕಾತಿ ಪತ್ರ ನೀಡಿದರೆ ಕರ್ತವ್ಯಕ್ಕೆ ಹಾಜರಾಗಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಶಿಕ್ಷಣ ಇಲಾಖೆಯು ಈಗಾಗಲೇ ಮೀಸಲಾತಿ ಅಡಿ ನೇಮಕವಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪ್ರತಿ ನೀಡಿದೆ. ಆದರೆ, ಸಾಮಾನ್ಯ ಅಭ್ಯರ್ಥಿಗಳಿಗೆ ಕೊನೇ ಘಳಿಗೆಯಲ್ಲಿ ಸಿಂಧುತ್ವ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂಬ ನಿಯಮ ಮಾಡಿದ್ದರಿಂದ ನಾವು ಯಾವುದೇ ಮೀಸಲಾತಿ ಪಡೆಯದಿದ್ದರೂ ಸರ್ಕಾರದ ತಪ್ಪಿನಿಂದ ನಾವು ಬಲಿಪಶುಗಳಾಗುವಂತೆ ಆಗಿದೆ.
ನಿಮಯಗಳ ಪ್ರಕಾರ ನಾವು ಯಾವುದೇ ಸಿಂಧುತ್ವ ನೀಡುವ ಅಗತ್ಯವಿಲ್ಲ. ಇದನ್ನು ಸ್ವತಃ ಮುಖ್ಯಮಂತ್ರಿಗಳು ಕೂಡ ಹೇಳಿದ್ದಾರೆ. ಹೀಗಿದ್ದರೂ ಶಿಕ್ಷಣ ಇಲಾಖೆ ಅಧಿಕಾರಿಗಳ ಪ್ರತಿಷ್ಠೆಯಿಂದ ಸಾಮಾನ್ಯ ಅಭ್ಯರ್ಥಿಗಳ ಪರಿಸ್ಥಿತಿ ಚಿಂತಾಕ್ರಾಂತವಾಗಿದೆ. ಕಳೆದ ಒಂದು ವರ್ಷದಿಂದಲೂ ಉದ್ಯೋಗವೂ ಇಲ್ಲದೆ ನಿರುದ್ಯೋಗಿಗಳಾಗಿ ಕುಟುಂಬಕ್ಕೆ ಹೊರೆಯಾಗಿದ್ದೇವೆ. ಮಾನವೀಯತೆ ದೃಷ್ಟಿಯಿಂದ ತುರ್ತಾಗಿ ಆದೇಶ ಪ್ರತಿ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಸುಪ್ರೀಂಕೋರ್ಟ್ ತೀರ್ಪಿನ ಆದೇಶ ಪ್ರತಿ ಇನ್ನೂ ಶಾಲಾ ಶಿಕ್ಷಣ ಇಲಾಖೆಗೆ ದೊರೆತಿಲ್ಲ. ಆದೇಶ ಪ್ರತಿಯನ್ನು ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡುವಂತೆ ನಾವು ಸುಪ್ರೀಂಕೋರ್ಟ್‌ಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ಇದನ್ನು ಅಭ್ಯರ್ಥಿಗಳು ಅರ್ಥ ಮಾಡಿಕೊಳ್ಳಬೇಕು. ತೀರ್ಪಿನ ಪ್ರತಿ ಸಿಕ್ಕ ಕೂಡಲೇ ಸಂಬಂಧಪಟ್ಟ ಅಭ್ಯರ್ಥಿಗಳ ನೇಮಕಾತಿ ಆದೇಶ ಪ್ರತಿಯನ್ನು ನೀಡಲಾಗುತ್ತದೆ.– ಬಿ.ಬಿ. ಕಾವೇರಿ, ಶಾಲಾ ಶಿಕ್ಷಣ ಇಲಾಖೆ ಆಯಕ್ತೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
