ಬೆಂಗಳೂರು :ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಸಿರಿ ಎಥೆನಾಲ್ ಘಟಕವನ್ನು ಏಕಾಏಕಿ ಮುಚ್ಚುವಂತೆ ಆದೇಶ ಹೊರಡಿಸಿದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನಡೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಮೊದಲು ಎಥೆನಾಲ್ ಘಟಕ ಆರಂಭಿಸಲು ಅನುಮತಿ ನೀಡಲಾಗಿದ್ದು, ಈಗ ಏಕಾಏಕಿ ಮುಚ್ಚಲು ಆದೇಶ ನೀಡಿದ ಬಗ್ಗೆ ಕಾರಣ ಕೊಡಬೇಕು. ನಿಮ್ಮ ತೀರ್ಮಾನದ ಹಿಂದಿನ ಕಾರಣ ಜನರಿಗೆ ತಿಳಿಯಬೇಕು ಎಂದು ನ್ಯಾಯಾಲಯ ಹೇಳಿದೆ. ಘಟಕ ಮುಚ್ಚುವಂತೆ ಆದೇಶ ಬಂದ ಬೆನ್ನಲ್ಲೇ ಇದನ್ನು ಪ್ರಶ್ನಿಸಿ ಯತ್ನಾಳ್ ಪುತ್ರ ರಮಣಗೌಡ ಬಿ.ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ಕೃಷ್ಣ.ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.
ಈ ವೇಳೆ ಘಟಕ ಮುಚ್ಚುವುದಕ್ಕೆ ಕಾರಣ ನೀಡುವಂತೆ ಪೀಠವು ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಪ್ರಶ್ನಿಸಿತು. ಕೆಎಸ್‌ಪಿಸಿಬಿ ಅಧಿಕಾರಿಗಳು ಸಿದ್ಧಸಿರಿ ಎಥೆನಾಲ್ ಘಟಕಕ್ಕೆ ಪರಿಸರ ಅನುಮೋದನೆ ಹಿಂಪಡೆದಿರುವುದರಿಂದ, ಮುಚ್ಚುವಂತೆ ಆದೇಶಿಸಲಾಗಿದೆ. ಈ ಘಟಕವನ್ನು ನಡೆಸಲು ಪರಿಸರ ಇಲಾಖೆ ಅನುಮತಿ ನೀಡಿಲ್ಲ ಎಂದು ಹೈಕೋರ್ಟ್‌ಗೆ ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಯಿಸಿದ ನ್ಯಾಯಪೀಠ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸಿದ್ಧಸಿರಿ ಘಟಕವನ್ನು ಮುಚ್ಚಿಸಲು ತೆಗೆದುಕೊಂಡ ತೀರ್ಮಾನಕ್ಕೆ ಕಾರಣ ಒದಗಿಸಬೇಕು. ಸಂವಿಧಾನಿಕ ಸಂಸ್ಥೆ ಅನುಮತಿ ನೀಡದಿರುವುದಕ್ಕೆ ಕಾರಣ ನೀಡಬೇಕು. ನಮ್ಮಲ್ಲಿರುವುದು ಜನಕಲ್ಯಾಣ ಆಡಳಿತ, ಮೊಗಲ್ ಸರ್ಕಾರವಲ್ಲ. ತೀರ್ಮಾನದ ಹಿಂದಿನ ಕಾರಣ ಜನರಿಗೆ ತಿಳಿಯಬೇಕು ಎಂದು ಹೇಳಿ ವಿಚಾರಣೆಯನ್ನು ಜೂ.4 ಕ್ಕೆ ನಿಗದಿಪಡಿಸಿ ಮುಂದೂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
