ಬೆಂಗಳೂರು: ರಾಜ್ಯದಲ್ಲಿ ಸಾವಯವ ಕೃಷಿ ಉತ್ತೇಜನ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಾವಯವ ಟಾಸ್ಕ್ ಫೋರ್ಸ್(ಕಾರ್ಯಪಡೆ)ರಚಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.
ನಗರದ ಕೃಷಿ ಆಯುಕ್ತರ ಕಚೇರಿಯಲ್ಲಿ ರಾಜ್ಯ ಮಟ್ಟದ ಸಾವಯವ ಕೃಷಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿ ಅಧ್ಯಕ್ಷ ಆನಂದ್ ಉಪ್ಪಳ್ಳಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾವಯವ ಕೃಷಿ ಉತ್ತೇಜನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈಗಾಗಲೇ ಬೆಂಗಳೂರು ಸಾವಯಕ ಕೃಷಿ ರಾಜಧಾನಿ ಎಂದು ಗುರುತಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಕರ್ನಾಟಕವೇ ದೇಶದ ಸಾವಯವ ರಾಜಧಾನಿ ಎನ್ನುವಂತಾಗಬೇಕು. ಈ ನಿಟ್ಟಿನಲ್ಲಿ ಒಂದು ಕಾರ್ಯಪಡೆ ಸಮಿತಿ ರಚಿಸುವಂತೆ ಬಿ.ಸಿ.ಪಾಟೀಲರು ಸೂಚಿಸಿದರು.
ಇದನ್ನೂ ಓದಿ:ಈ ಗ್ರಾಮದಲ್ಲಿ ಆನ್​ಲೈನ್ ಕ್ಲಾಸ್​ ಫೇಲಾಯಿತು- ಶಾಲೆಯೇ ಮೊಬೈಲ್ ಆಯಿತು ನೋಡಿ!
ಆನಂದ್ ಉಪ್ಪಳ್ಳಿ ಮಾತನಾಡಿ, ಸಾವಯವ ಕೃಷಿಯನ್ನು ಬೃಹತ್ ಮಟ್ಟದಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ರೂಪುರೇಷೆ ತಯಾರಿಸಬೇಕು. ಇದಕ್ಕಾಗಿ ಸಾವಯವ ಟಾಸ್ಕ್ ಫೋರ್ಸ್ ರಚಿಸಬೇಕು ಎಂದರು.
ಫಾರಿನ್ ಕಲರ್ ಟಿವಿ ಆಸೆ ಬಿಟ್ಟುಬಿಡಿ: ಇನ್ನೇನಿದ್ರೂ ಮೇಡ್ ಇನ್ ಇಂಡಿಯಾ ಜಮಾನಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − nine =
Remember me
