ತುಮಕೂರು:ಅಭಿವೃದ್ಧಿ ಕಾರ್ಯಕ್ಕಿಂತ ಗ್ಯಾರಂಟಿ ಜಾರಿಗೇ ನಮ್ಮ ಸರ್ಕಾರದ ಮೊದಲ ಆದ್ಯತೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ಇಂದು ಅವರು ಸುದ್ದಿಗಾರರ ಜತೆ ಮಾತನಾಡುತ್ತ ಈ ವಿಷಯ ತಿಳಿಸಿದರು.
ಗ್ಯಾರಂಟಿ ಅನುಷ್ಠಾನವೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿತ್ತು. ಹಾಗಾಗಿ ಈ ಬಾರಿಯ ಬಜೆಟ್​​ನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣ ಮೀಸಲಿಡಲು ಆಗಲಿಲ್ಲ. ನಮ್ಮ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡಲು 52 ಸಾವಿರ ಕೋಟಿ ರೂ. ಬೇಕಾಗುತ್ತದೆ. ಆದ್ದರಿಂದ ನಾವು ಮಂಡಿಸಿದ್ದ ಬಜೆಟ್​ನಲ್ಲಿ ಅಭಿವೃದ್ಧಿ ಕಾರ್ಯದ ಹೊಸ ಕಾಮಗಾರಿಗೆ ಹಣ ನೀಡಲು ಆಗಲಿಲ್ಲ. ಹಳೇ ಕಾಮಗಾರಿಗಳಿಗೆ ಮಾತ್ರ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ:ಬೆಂಗಳೂರಿನ ಎಲ್ಲ ಆಸ್ತಿಗಳ ದಾಖಲೆ ಸಂಗ್ರಹಿಸಿ ಸ್ಕ್ಯಾನ್​ ಮಾಡಲಿದೆ ಸರ್ಕಾರ: ಉದ್ದೇಶ ಏನೆಂದು ತಿಳಿಸಿದ ಡಿಸಿಎಂ
ಕಾಂಗ್ರೆಸ್​ ಚುನಾವಣಾಪೂರ್ವದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಐದು ಭರವಸೆಗಳನ್ನು ನೀಡಿದ್ದು, ಅಧಿಕಾರಕ್ಕೆ ಬಂದರೆ ಅವುಗಳನ್ನು ಗ್ಯಾರಂಟಿ ಜಾರಿಗೆ ತರುವುದಾಗಿ ಹೇಳಿತ್ತು. ಅದರಂತೆ ಐದು ಗ್ಯಾರಂಟಿಗಳ ಪೈಕಿ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಜಾರಿಗೆ ತಂದಿದ್ದು, ಗೃಹಲಕ್ಷ್ಮಿ ಹಾಗೂ ಯುವನಿಧಿ ಇನ್ನೇನು ಜಾರಿಗೆ ಬರಲಿವೆ.
ಯಂಗ್​ ಆಗಿಯೇ ಇರಲು ಕೋಟ್ಯಂತರ ರೂ. ಖರ್ಚು ಮಾಡಿದ, ಮಗನ ರಕ್ತ ತನ್ನ ದೇಹಕ್ಕೆ ಸೇರಿಸಿಕೊಂಡ: ಕೊನೆಗೆ ಆಗಿದ್ದೇನು?

ನೇರಳೆ ಹಣ್ಣುಗಳನ್ನು ಅತಿಯಾಗಿ ಸೇವಿಸಿದರೆ ಏನಾಗುತ್ತದೆ?: ಆರೋಗ್ಯಕ್ಕೇನು ತೊಂದರೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + fourteen =
Remember me
