ಬೆಂಗಳೂರು:ಅಪಾರ ಅಭಿಮಾನಿಗಳನ್ನು ಅಗಲಿರುವ ಅಪ್ಪು ಸ್ಮರಣಾರ್ಥ ಮತ್ತೊಂದು ಕಾರ್ಯವನ್ನು ಸರ್ಕಾರ ಮಾಡಿದೆ. ರಾಜಧಾನಿಯ ಪ್ರಮುಖ ರಸ್ತೆಯೊಂದಕ್ಕೆ ‘ಕರ್ನಾಟಕ ರತ್ನ ಪುನೀತ್‌ ರಾಜಕುಮಾರ್‌’ ಹೆಸರನ್ನಿಡಲು ಸರ್ಕಾರ ನಿರ್ಧರಿಸಿದ್ದು, ನಾಳೆಯೇ ನಾಮಕರಣ ನಡೆಯಲಿದೆ.
ಬನ್ನೇರುಘಟ್ಟ ರಸ್ತೆಯ ವೆಗಾ ಸಿಟಿ ಮಾಲ್‌ ಹಾಗೂ ನಾಯಂಡಹಳ್ಳಿ ಜಂಕ್ಷನ್‌ ನಡುವಿನ ಹೊರವರ್ತುಲ ರಸ್ತೆಗೆ ‘ಕರ್ನಾಟಕ ರತ್ನ ಪುನೀತ್‌ ರಾಜ್‌ಕುಮಾರ್‌’ ರಸ್ತೆ ಎಂದು ನಾಳೆ ನಾಮಕರಣ ಮಾಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪದ್ಮನಾಭನಗರದ ಅಟಲ್‌ ಬಿಹಾರಿ ವಾಜಪೇಯಿ ಮೈದಾನದಲ್ಲಿ ಫೆ.7ರ ಸಂಜೆ 6ರ ಸುಮಾರಿಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ರಸ್ತೆಯ ನಾಮಫಲಕ ಉದ್ಘಾಟಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸೆಂಚುರಿ ಸ್ಟಾರ್ ಶಿವರಾಜಕುಮಾರ್‌, ರಾಘವೇಂದ್ರ ರಾಜಕುಮಾರ್‌ ಹಾಗೂ ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜಕುಮಾರ್‌ ಸೇರಿದಂತೆ ಕನ್ನಡ ಚಿತ್ರರಂಗದ ಪ್ರಮುಖ ಕಲಾವಿದರು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್​ನಲ್ಲಿ ನಡೆಯಲಿದ್ದು, ಅದರ ಲಾಂಛನದ ಅನಾವರಣ ಕೂಡ ಈ ರಸ್ತೆ ನಾಮಕರಣ ಸಂದರ್ಭದಲ್ಲೇ ನಡೆಯಲಿದೆ ಎಂದು ಅಶೋಕ ತಿಳಿಸಿದರು. ರಾಜ್ಯ ಸರ್ಕಾರ ಈ ಚಿತ್ರೋತ್ಸವಕ್ಕೆ ಈಗಾಗಲೇ 4 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ನಟ ಚಿರಂಜೀವಿ, ನಟಿ ರೇಖಾ ಮುಂತಾದವರಿಂದ ಉದ್ಘಾಟನೆ ಮಾಡಲು ಉದ್ದೇಶಿಸಲಾಗಿದೆ. ಹೀಗಾಗಿ ಹೆಚ್ಚಿನ ಅನುದಾನಕ್ಕಾಗಿ ಸಿಎಂ ಅವರನ್ನು ಕೋರಲಾಗುವುದು ಎಂದೂ ಅವರು ತಿಳಿಸಿದರು.
1,500ಕ್ಕೂ ಅಧಿಕ ಜನರು ಸತ್ತ ಬೆನ್ನಿಗೇ ಮತ್ತೊಂದು ಭೀಕರ ಭೂಕಂಪ!; ಮೂರನೇ ಸಲ ನಡುಗಿದ ಟರ್ಕಿ

ಐವತ್ತಕ್ಕೂ ಅಧಿಕ ಜನರಿಂದ ಚೀಟಿ ಕಟ್ಟಿಸಿಕೊಂಡು ಪರಾರಿಯಾದ ದಂಪತಿ; ಕೋಟಿಗಟ್ಟಲೆ ರೂ. ವಂಚನೆ, ಪೊಲೀಸರಿಗೆ ದೂರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 11 =
Remember me
