ಕಾವೇರಿ ನದಿ ಶುದ್ಧಿಕರಣಹಾಗೂ ಪುನಶ್ಚೇತನಕ್ಕಾಗಿ ಜ.30ರೊಳಗೆ ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಭಾಗಮಂಡಲದಲ್ಲಿ ಮೇಲ್ಸೇತುವೆ ನಿರ್ಮಾಣ ಯೋಜನೆ ಪ್ರಶ್ನಿಸಿ ಹಾಗೂ ಕಾವೇರಿ ನದಿ ಶುದ್ಧೀರಕಣಕ್ಕೆ ನಿರ್ದೇಶಿಸುವಂತೆ ಕೋರಿ ಭಾಗಮಂಡಲ ಗ್ರಾಮದ ಎಸ್.ಇ. ಜಯಂತ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಪೀಠ ಸೋಮವಾರ ವಿಚಾರಣೆ ನಡೆಸಿತು.
ಕಾವೇರಿ ನದಿ ಶುದ್ಧೀಕರಣ ಹಾಗೂ ಪುನಶ್ಚೇತನದ ಬಗ್ಗೆ ಹೈಕೋರ್ಟ್ 2019ರ ಜೂ.28ರಂದು ಆ ಬಗ್ಗೆ ನಿರ್ದೇಶನ ನೀಡಿತ್ತು. ಆದರೂ ಸರ್ಕಾರ ಅದನ್ನು ಪಾಲಿಸಿಲ್ಲ. ನದಿ ಮಲಿನವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಹೊಣೆಯಾಗಿದೆ. ಆದ್ದರಿಂದ, ಈ ತಿಂಗಳ ಅಂತ್ಯದೊಳಗೆ ಕ್ರಿಯಾ ಯೋಜನೆ ಸಲ್ಲಿಸಬೇಕು ಎಂದು ನ್ಯಾಯಪೀಠ ಹೇಳಿತು.
ನದಿ ಮಲಿನವಾಗುವುದನ್ನು ತಡೆಯಲು ವಿಸõತ ಯೋಜನಾ ವರದಿ (ಡಿಪಿಆರ್) ಸಿದ್ದಪಡಿಸುವುದಾಗಿ ಸರ್ಕಾರ ಈ ಹಿಂದೆ ಹೇಳಿತ್ತು. ಅದಕ್ಕಾಗಿ ಕಾಲಾವಕಾಶ ಸಹ ನೀಡಲಾಗಿತ್ತು. ಇದೀಗ ಫೆ.2 ಕಡೆಯ ದಿನವಾಗಿದ್ದು, ಅಷ್ಟರಲ್ಲಿ ಡಿಪಿಆರ್ ಸಲ್ಲಿಸಬೇಕು ಹೈಕೋರ್ಟ್ ತಾಕೀತು ಮಾಡಿತು. ಈ ವೇಳೆ, ಡಿಪಿಆರ್ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡುವಂತೆ ಸರ್ಕಾರಿ ವಕೀಲರು ಮಾಡಿದ ಮನವಿಯನ್ನು ನ್ಯಾಯಪೀಠ ತಳ್ಳಿಹಾಕಿತು.
ಪ್ರಕರಣವೇನು?:ಕಾವೇರಿ ನದಿಗೆ ಅಡ್ಡಲಾಗಿ ಭಾಗಮಂಡಲದ ಬಳಿ ಮಡಿಕೇರಿ-ತಲಕಾವೇರಿ ಹಾಗೂ ನಾಪೋಕ್ಲು-ತಲಕಾವೇರಿ ರಸ್ತೆಗಳಿಗೆ ಸಂಪರ್ಕ ಕಲ್ಪಿಸಲು 28.08 ಕೋಟಿ ರೂ.ವೆಚ್ಚದಲ್ಲಿ ಮೆಲ್ಸೇತುವೆ ನಿರ್ವಣಕ್ಕೆ 2017ರ ಆ.28ರಂದು ಸರ್ಕಾರ ಟೆಂಡರ್ ಕರೆದಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದ್ದು, ತಲಕಾವೇರಿ ಹಾಗೂ ಭಾಗಮಂಡಲಕ್ಕೆ ಬರುವ ಪ್ರವಾಸಿಗರಿಂದ ಕಾವೇರಿ, ಕನ್ನಿಕೆ ಮತ್ತು ಸುಜ್ಯೋತಿ (ಗುಪ್ತ ಗಾಮಿನಿ) ನದಿಗಳು ಮಲಿನ ಆಗುತ್ತಿವೆ. ಒಳಚಂಡಿ ನೀರನ್ನು ನದಿ ಹರಿಸಲಾಗುತ್ತಿದೆ. ಈ ಮಧ್ಯೆ ಸರ್ಕಾರ ಮೇಲ್ಸೇತುವೆ ಯೋಜನೆ ಕೈಗೆತ್ತಿಕೊಂಡಿದ್ದು, ಕಾಮಗಾರಿಯಿಂದ ನದಿಗಳು ಮತ್ತಷ್ಟು ಮಲಿನವಾಗುವುದರ ಜತೆಗೆ ಸುತ್ತಲಿನ ಪರಿಸರದ ಮೇಲೂ ದುಷ್ಪರಿಣಾಮ ಬೀರಬಹುದು ಎಂದು ಅರ್ಜಿಯಲ್ಲಿ ದೂರಲಾಗಿದೆ.
ದೇವರ ಹೆಸರಿನಲ್ಲಿ ಅಕ್ರಮ ಸಲ್ಲ
ಬೆಂಗಳೂರು:ರಸ್ತೆ, ಉದ್ಯಾನ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿರ್ವಿುಸಲಾಗಿರುವ ಧಾರ್ವಿುಕ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಅನುಸಾರ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ದೇವಸ್ಥಾನ, ಮಸೀದಿ, ಚರ್ಚ್ ಸೇರಿ ಎಲ್ಲ ಬಗೆಯ ಅನಧಿಕೃತ ಕಟ್ಟಡಗಳ ತೆರವಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ಪ್ರಕರಣ ಸಂಬಂಧ ಕಳೆದ ಡಿಸೆಂಬರ್​ನಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಲ್ಲಿಸಿರುವ ಪ್ರಮಾಣಪತ್ರ ಪರಿಶೀಲಿಸಿದ ನ್ಯಾಯಪೀಠ, ಸಾಕಷ್ಟು ಕಾಲಾವಕಾಶ ನೀಡಿದರೂ ಸರ್ಕಾರ ಈವರೆಗೆ ಅಕ್ರಮ ಧಾರ್ವಿುಕ ಕೇಂದ್ರಗಳನ್ನೇ ಗುರುತಿಸಿಲ್ಲ. ಇದು ದುರದೃಷ್ಟಕರ. ದೇವರ ಹೆಸರಿನ ಅಕ್ರಮ ತಡೆಯಲು ಸರ್ಕಾರಕ್ಕೆ ಇಚ್ಛೆಯಿಲ್ಲವೇ ಎಂದು ಪ್ರಶ್ನಿಸಿತು.
ಸರ್ಕಾರಿ ವಕೀಲರು ವಾದ ಮಂಡಿಸಿ, ಜಿಲ್ಲಾಧಿಕಾರಿಗಳಿಗೆ ಅವರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿನ ಅಕ್ರಮ ಧಾರ್ವಿುಕ ಕೇಂದ್ರಗಳ ಬಗ್ಗೆ 2020ರ ಮಾ.31ರೊಳಗೆ ವರದಿ ಸಲ್ಲಿಸಲು ಸರ್ಕಾರ ಸೂಚಿಸಿದೆ. ಅದನ್ನು ಒಟ್ಟುಗೂಡಿಸಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, 2009ರ ಸುಪ್ರೀಂಕೋರ್ಟ್ ಆದೇಶದ ನಂತರ ತಲೆಎತ್ತಿರುವ ಅಕ್ರಮ ಕೇಂದ್ರಗಳನ್ನು ತೆರವಿಗೆ ಏಕೆ ಆದೇಶಿಸಿಲ್ಲ? ಫೆ.4ರೊಳಗೆ ಮುಖ್ಯ ಕಾರ್ಯದರ್ಶಿಗಳು ಹೊಸದಾಗಿ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಹೇಳಿ ವಿಚಾರಣೆ ಮುಂದೂಡಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − two =
Remember me
