
ಬೆಂಗಳೂರು: ವರುಣಾದ ಜನ ನಿಮ್ಮನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನೀವೇ ಅವರ ಕೆಲಸ ಮಾಡಬೇಕು. ನಿಮ್ಮ ಪುತ್ರನಿಗೆ ಕ್ಷೇತ್ರದ ‘ಹೊರಗುತ್ತಿಗೆ’ source) ಯಾಕೆ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ. ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು? ತಿರುಚುವ, ವಕ್ರೀಕರಿಸುವ ಚಾಳಿ ಬಿಡಿ. ನೀವು ಈ ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಪ್ರತಿನಿಧಿ ಮತ್ತು ಉತ್ತರದಾಯಿ.ಉತ್ತರ ಕೊಡಿ ಎಂದು ಕೇಳಿದ್ದಾರೆ.ಒಂದು ವಿಡಿಯೋ ಬಗ್ಗೆ ಪ್ರಶ್ನಿಸಿದ್ದಕ್ಕೆ ನಿಮಗೆ, ನಿಮ್ಮ ಸಂಪುಟಕ್ಕೆ ನಿದ್ದೆಯೇ ಹಾರಿ ಹೋಗಿದೆ. ಕೆಲಸ ಬಿಟ್ಟು ನಿಮಗೆ ಸುವ್ವಿಸುವ್ವಾಲೆ ಹಾಡುತ್ತಿದೆ. ಅವರು ಸಚಿವರೋ, ನಿಮ್ಮ ಗಸ್ತಿಗೆ ನಿಂತ ಬೌನ್ಸರುಗಳೋ?? ಸಚಿವರನ್ನು ಗುಂಪು ಗುಂಪಾಗಿ ಛೂ ಬಿಟ್ಟರೆ ಕುಮಾರಸ್ವಾಮಿ ಹೆದರಿ ಓಡುತ್ತಾರೆಂದು ಭಾವಿಸಿದರೆ ಅದು ನಿಮ್ಮ ಪೆದ್ದುತನವಷ್ಟೇ ಎಂದು ಟಾಂಗ್ ಕೊಟ್ಟಿದ್ದಾರೆ.ವರುಣಾದ ಜನ ನಿಮ್ಮನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನೀವೇ ಅವರ ಕೆಲಸ ಮಾಡಬೇಕು. ನಿಮ್ಮ ಪುತ್ರನಿಗೆ ಕ್ಷೇತ್ರದ ‘ಹೊರಗುತ್ತಿಗೆ’ (Out source) ಯಾಕೆ? ಸಿಎಂ ಆಗಿದ್ದಾಗ ನಾನು ನನ್ನ ಮಗನಿಗೆ ಕ್ಷೇತ್ರದ ಹೊರಗುತ್ತಿಗೆ ನೀಡಿದ್ದಿಲ್ಲ. ನೀವು ಮಗನಿಗೆ ವರುಣಾದ ಹೊರಗುತ್ತಿಗೆ ನೀಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
ನನಗೆ ತಿಳಿದಮಟ್ಟಿಗೆ ಈವರೆಗೆ ಯಾವ ಸಿಎಂ ಕೂಡ ಸ್ವಕ್ಷೇತ್ರದ ಹೊರಗುತ್ತಿಗೆ ಮಕ್ಕಳಿಗೆ ಕೊಟ್ಟಿದ್ದಿಲ್ಲ. ನೀವು ಕೊಟ್ಟು ಮೇಲ್ಪಂಕ್ತಿ ಹಾಕಿದ್ದೀರಿ. ಹಿಂಬಾಗಿಲಿನಿಂದ ಮಗನಿಗೆ ಅಧಿಕಾರ ಕೊಡಲು ಕೆ.ಡಿ.ಪಿ ಪಟ್ಟ ಕಟ್ಟಿದ್ದೀರಿ! ಸಂವಿಧಾನದಲ್ಲಿ ಇದಕ್ಕೆ ಅವಕಾಶವಿರುವ ಯಾವುದಾದರೂ ವಿಧಿ-ವಿಧಾನ ಇದೆಯಾ? ಇದ್ದರೆ ತಿಳಿಸಿ ಎಂದು ಸವಾಲು ಹಾಕಿದ್ದಾರೆ.
ನನಗೆ ತಿಳಿದಂತೆ CSR ಎಂದರೆ, Corporate social responsibility. ಈಗ ಅದು Corrupt Son Of Siddaramaiah ಆಗಿದೆ! ರಾಜ್ಯದಲ್ಲಿ CSR ಕಲೆಕ್ಷನ್ ಮಾಡಲು ನಿಮ್ಮ ಸುಪುತ್ರನಿಗೆ ಹೊರಗುತ್ತಿಗೆಯನ್ನು ನೀವೇ ಕೊಟ್ಟಿದ್ದೀರಾ, ಹೇಗೆ? 224 ಕ್ಷೇತ್ರಗಳ CSR ಉಸ್ತುವಾರಿ ಅವರದ್ದೇನಾ? 2% CSR ಮೇಲೂ ನಿಮ್ಮ ಕಾಕದೃಷ್ಟಿ ಬಿದ್ದಂತಿದೆ ಎಂದು ಲೇವಡಿ ಮಾಡಿದ್ದಾರೆ.
ನಿಮ್ಮ ಸಚಿವಾಲಯದ ಅಧಿಕಾರಿಗಳ ಕರ್ತವ್ಯ ಹಂಚಿಕೆ ಪಟ್ಟಿ ಪ್ರಕಾರ; ವಿಶೇಷ ಕರ್ತವ್ಯಾಧಿಕಾರಿ ಆರ್.‌ಮಹದೇವುಗೆ ಶಿಕ್ಷಣ ಇಲಾಖೆ ಹೊಣೆ ಇಲ್ಲ. ಜಂಟಿ ಕಾರ್ಯದರ್ಶಿ ಎಂ.ರಾಮಯ್ಯಗೆ ಆ ಹೊಣೆ ಇದೆ. ವರುಣಾ ಹೊಣೆ ಇನ್ನೊಬ್ಬ ವಿಶೇಷ ಕರ್ತವ್ಯಾಧಿಕಾರಿ ಕೆ.ಎನ್.‌ವಿಜಯ್‌ ರದ್ದು. ಇದು ಸತ್ಯಸ್ಥಿತಿ. ಅಪರ ಸತ್ಯಹರಿಶ್ಚಂದ್ರರಾದ ನೀವೇ ಸುಳ್ಳು ಹೇಳೋದೇ? ಎಂದು ಕೆಣಕಿದ್ದಾರೆ.
ಯತೀಂದ್ರರು ಶಿಕ್ಷಣದ ಕುರಿತು ಎಂ.ರಾಮಯ್ಯ ಜತೆ, ವರುಣಾ ಬಗ್ಗೆ ಕೆ.ಎನ್.ವಿಜಯ್‌ ಜತೆ ಚರ್ಚಿಸದೆ, ಇವೆರಡಕ್ಕೂ ಸಂಬಂಧವಿಲ್ಲದವೇ ‘ಸಿಆಸು’ ಸಚಿವರ ಆಪ್ತಶಾಖೆ, ವರ್ಗಾವಣೆ -ಸೇವಾ ಹೊಣೆಯ ಮಹದೇವು ಜತೆ ಫೋನ್‌ ಚರ್ಚೆ ನಡೆಸಿದ್ದೇಕೆ?CSRಗೂ ಅವರಿಗೂ ಸಂಬಂಧವೇನು?CSR ಶಿಕ್ಷಣ ಇಲಾಖೆಗೆ ಸಂಬಂಧಿಸಿದ್ದಲ್ಲ ಎಂದು ಮಧು ಬಂಗಾರಪ್ಪ ಕೂಡ ಹೇಳಿದ್ದಾರೆ!
ನಿಮ್ಮ, ನಿಮ್ಮ ಪುತ್ರನಿಂದ ಇಡೀ ಕರ್ನಾಟಕ ತಲೆ ತಗ್ಗಿಸುವಂತೆ ಆಗಿದೆ. ಕಾಸಿಗಾಗಿ ಹುದ್ದೆ ದಂಧೆಯಿಂದ ಕರುನಾಡನ್ನು ಕುಖ್ಯಾತಗೊಳಿಸಿದ್ದೀರಿ. ಹೋದ ಮಾನ ವಾಪಸ್‌ ಪಡೆಯಲಿಕ್ಕೇನು ಮಾಡುತ್ತೀರಿ? ವಿಧಾನಸೌಧದ ಮುಂದೆ ತಲೆತಗ್ಗಿಸಿ ನಿಂತು ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತೀರಾ? ಅಷ್ಟು ನೈತಿಕ ಧೈರ್ಯ ನಿಮಗೆ ಉಂಟೇ? ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಪೆನ್‌’ಡ್ರೈವ್‌ ಇದೆ, ಕಳೆದಿಲ್ಲ. ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ?ಸಿಎಂ ಸಾಹೇಬರೇ, ‘ಸಿಂಹ ಸಿಂಗಲ್ಲಾಗಿ ಬೇಟೆಯಾಡುತ್ತದೆ, —— ಗುಂಪಾಗಿ ಬರುತ್ತವೆ.’ ಬಿಟ್ಟಸ್ಥಳ ಭರ್ತಿ ಮಾಡಿಸುವ ಕೆಲಸ ನನ್ನಿಂದ ನೀವು ಮಾಡಿಸುವುದಿಲ್ಲ ಎಂದು ನಂಬಿದ್ದೇನೆ.ನನ್ನ ಮಾನಸಿಕ ಸ್ವಾಸ್ಥ್ಯ ಇರಲಿ. ನಿಮ್ಮ ಅಧಿಕಾರದ ಅಂಟುರೋಗಕ್ಕೆ ಮದ್ದೇನು? ನಿಮಗಿರುವ ಧನದಾಹ ಜಾಡ್ಯಕ್ಕೆ ಚಿಕಿತ್ಸೆ ಪಡೆಯಬಾರದೇ? ಮಾನಸಿಕ ಅಸ್ವಾಸ್ಥ್ಯಕ್ಕಿಂತ ಇದು ಮಾರಕ ಮನೋರೋಗವಲ್ಲವೇ? ಮುಖ್ಯಮಂತ್ರಿಯೇ ಇಂಥ ವಿನಾಶಕಾರಿ ಕಾಯಿಲೆಗೆ ತುತ್ತಾದರೆ ನಾಡಿನ ಪಾಡೇನು? ತುರ್ತುಚಿಕಿತ್ಸೆ ನಿಮಗೆ ಅಗತ್ಯವಿದೆ ಎಂದು ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + five =
Remember me
