ಬೆಂಗಳೂರು:ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಒಂದೂಕಾಲು ಲಕ್ಷಕ್ಕೆ ಸಮೀಪಿಸಿದೆ. ಕಳೆದ 24 ಗಂಟೆಗಳಲ್ಲಿ (ಗುರುವಾರ ಸಂಜೆ 5ರಿಂದ ಶುಕ್ರವಾರ ಸಂಜೆ 5 ಗಂಟೆವರೆಗೆ) 5,483 ಜನರು ಸೋಂಕಿಗೆ ಒಳಗಾಗಿದ್ದಾರೆ. ಒಟ್ಟು ಕೋವಿಡ್​ ರೋಗಿಗಳ ಸಂಖ್ಯೆ ಈಗ 1,24,115ಕ್ಕೆ ಏರಿದಂತಾಗಿದೆ.
ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆಯೂ 72,005 ಕ್ಕೆ ಏರಿದೆ. ಇಂದು ಕೋವಿಡ್​ನಿಂದಾಗಿ ಮೃತಪಟ್ಟವರು 84 ಜನ. ಒಟ್ಟಾರೆ ಸಾವಿನ ಸಂಖ್ಯೆ 2,314ಕ್ಕೆ ತಲುಪಿದೆ. ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. 3,130 ಜನರು ಕಳೆದ 24 ಗಂಟೆಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. 609 ಜನರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ;ಕರೊನಾ ಪಾಸಿಟಿವ್​ ಆದಾಗ ಆಸ್ಪತ್ರೆಗೆ ದಾಖಲಾಗಬೇಕೇ? ಬೇಡವೇ? ನೆರವಾಗಲಿದೆ ತಂತ್ರಜ್ಞಾನ
ಇನ್ನು ರಾಜಧಾನಿ ಬೆಂಗಳೂರಿನಲ್ಲಿ 2,220 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 55,544 ಜನರು ಸೋಂಕಿಗೆ ಒಳಗಾಗಿದ್ದಾರೆ. ಇದರಲ್ಲಿ 37,618 ಸಕ್ರಿಯ ಪ್ರಕರಣಗಳಾಗಿವೆ.
ಇಂದು 1,113 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, ಮರಣ ಸಂಭವಿಸಿದ ಕೋವಿಡ್​ ರೋಗಿಗಳ ಸಂಖ್ಯೆ 20. ಒಟ್ಟಾರೆಯಾಗಿ 1,029 ಜನರು ಬೆಂಗಳೂರೊಂದರಲ್ಲಿಯೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ;ಕರೊನಾ ಸಂಕಷ್ಟದಲ್ಲಿ ಭಾರತಕ್ಕೆ ಮತ್ತೊಂದು ಕುಖ್ಯಾತಿ; ಇದು ಕಳವಳಕಾರಿ ವಿದ್ಯಮಾನವೂ ಹೌದು…!
ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಅವರ ಪ್ರಥಮ ಹಾಗೂ ದ್ವಿತೀಯ ಸಂಪರ್ಕದಲ್ಲಿರುವವರನ್ನು ನಿಗಾದಲ್ಲಿ ಇರಿಸಲಾಗಿದೆ. ಇಂಥವರ ಸಂಖ್ಯೆಯಲ್ಲೂ ಭಾರಿ ಏರಿಕೆಯಾಗಿದೆ. ನಿಗಾದಲ್ಲಿರುವ ಪ್ರಥಮ ಸಂಪರ್ಕಿತರು 1,08,010 ಹಾಗೂ ದ್ವಿತೀಯ ಸಂಪರ್ಕಿತರು 94,159. ಹೀಗಾಗಿ ರಾಜ್ಯದಲ್ಲಿ ಒಟ್ಟು 2,02,169 ಜನ ಸಂಪರ್ಕಿತರು ನಿಗಾದಲ್ಲಿದ್ದಾರೆ.
ಜಿಲ್ಲಾವಾರು ಕೋವಿಡ್​ ಅಂಕಿ-ಅಂಶ

ಮತ್ತೊಂದು ಆಘಾತಕಾರಿ ಹಂತ ತಲುಪಿದ ಕರೊನಾ; ಭಾರತದ ಮೊದಲ ಪ್ರಕರಣ ವರದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 − one =
Remember me
