ಬೆಂಗಳೂರು:ರಾಜ್ಯದಲ್ಲಿ ಕೊವಿಡ್​-19 ಸೋಂಕಿನ ಪ್ರಸರಣ ದಿನೇದಿನೇ ಏರುತ್ತಲೇ ಇದೆ. ಕಳೆದ 24ಗಂಟೆಯಲ್ಲಿ ಬರೋಬ್ಬರಿ 442 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮಧ್ಯೆ ಒಂದೇ ದಿನದಲ್ಲಿ 519 ಜನ ಕರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದು ತುಸು ಸಮಾಧಾನ ತಂದಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,560ಕ್ಕೆ ಏರಿದ್ದು, ಸಕ್ರಿಯ ಪ್ರಕರಣಗಳು 3716. ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ ಒಟ್ಟು 6670. ಇನ್ನು ಒಂದೇ ದಿನದಲ್ಲಿ ಒಟ್ಟು ಆರು ಮಂದಿ ಕರೊನಾದಿಂದ ಮೃತಪಟ್ಟಿದ್ದು, ಸಾವಿನ ಸಂಖ್ಯೆ 170ಕ್ಕೆ ತಲುಪಿದೆ.
ಕಳೆದ 24ಗಂಟೆಯಲ್ಲಿ ಪತ್ತೆಯಾದ 442 ಪ್ರಕರಣಗಳಲ್ಲಿ 81 ಮಂದಿ ಅಂತಾರಾಜ್ಯ ಪ್ರಯಾಣಿಕರು. 23 ಜನರು ಅಂತಾರಾಷ್ಟ್ರೀಯ ಪ್ರಯಾಣಿಕರು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಕರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂದೂ ಕೂಡ ಬೆಂಗಳೂರಲ್ಲೇ ಅತಿ ಹೆಚ್ಚು, ಅಂದರೆ 113 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಕಲಬುರಗಿ-35, ರಾಮನಗರ -3, ದಕ್ಷಿಣ ಕನ್ನಡ-29, ಬಳ್ಳಾರಿ 26, ಧಾರವಾಡ 26, ಮೈಸೂರು 22, ಬಾಗಲಕೋಟೆ 18, ಕೊಡಗು 18, ಉಡುಪಿ 14, ಹಾಸನ 12, ಬೆಂಗಳೂರು ಗ್ರಾಮಾಂತರ 12, ಉತ್ತರ ಕನ್ನಡ 11, ವಿಜಯಪುರ, ಗದಗ, ಹಾವೇರಿ ತಲಾ 10, ಮಂಡ್ಯ 9, ಬೀದರ್ 8, ದಾವಣಗೆರೆ 7, ಬೆಳಗಾವಿ, ಶಿವಮೊಗ್ಗ, ಕೋಲಾರ ತಲಾ 4, ಯಾದಗಿರಿ, ಚಿಕ್ಕಬಳ್ಳಾಪುರ ತಲಾ 2, ತುಮಕೂರು, ಚಿಕ್ಕಮಗಳೂರು, ರಾಯಚೂರು ತಲಾ 1 ಕರೊನಾ ಪ್ರಕರಣಗಳು ಇಂದು ಪತ್ತೆಯಾಗಿವೆ. (ಏಜೆನ್ಸೀಸ್​)ಇದನ್ನೂ ಓದಿ:ಕರೊನಾದಷ್ಟೇ ಮಾರಕವಾಗಿದ್ದ ಈ ಕಾಯಿಲೆ ಕೊನೆಗೂ ತೊಲಗಿದೆ…!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
