ಯಾದಗಿರಿ:ಶವವೊಂದನ್ನು ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಪಲ್ಟಿಯಾದ ಪ್ರಕರಣವೊಂದು ನಡೆದಿದೆ. ಬೆಂಗಳೂರಿನಿಂದ ಕಲಬುರಗಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಯಾದಗಿರಿ ಸಮೀಪ ಈ ಅಪಘಾತ ಸಂಭವಿಸಿದೆ.
ಕಲಬುರಗಿ ನಗರದ ನಿವಾಸಿ ರಾಜು (45) ನಿನ್ನೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದು, ಆತನ ಶವವನ್ನು ಆ್ಯಂಬುಲೆನ್ಸ್​ನಲ್ಲಿ ಕಲಬುರಗಿಗೆ ಕೊಂಡೊಯ್ಯಲಾಗುತ್ತಿತ್ತು. ಆಗ ಯಾದಗಿರಿ ತಾಲೂಕಿನ ಶೆಟ್ಟಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶವ ಸಹಿತ ಆ್ಯಂಬುಲೆನ್ಸ್ ಪಲ್ಟಿಯಾಗಿದೆ.
ಈ ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಳಿಕ ಕುಟುಂಬಸ್ಥರು ಇನ್ನೊಂದು ವಾಹನದಲ್ಲಿ ಶವ ಕೊಂಡೊಯ್ದರು. ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಇದು ನಾಯಿಯಲ್ಲ, ನಾಯಿಯಂತೆ ಕಾಣುವ ಮನುಷ್ಯ: 40 ದಿನಗಳೊಳಗೆ ಆಯ್ತು ರೂಪಾಂತರ!
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 − 1 =
Remember me
