ಚಿಕ್ಕಬಳ್ಳಾಪುರ:ಕರೊನಾ ಸೋಂಕು ಎಲ್ಲೆಡೆ ತೀವ್ರಗತಿಯಲ್ಲಿ ಏರುತ್ತಿದ್ದರೆ ಮತ್ತೊಂದೆಡೆ ಸರಿಯಾದ ಸಮಯದಲ್ಲಿ ಸರಿಯಾದ ಪ್ರಮಾಣದಲ್ಲಿ ಆಕ್ಸಿಜನ್ ಸಿಲಿಂಡರ್​ಗಳು ಸಿಗದೆ ಸೋಂಕಿತರು ಉಸಿರುಗಟ್ಟಿ ಒದ್ದಾಡಿ ಕೊನೆಯುಸಿರೆಳೆದಿದ್ದಾರೆ. ರಾಜ್ಯದಲ್ಲಿ ಇಂಥ ಪರಿಸ್ಥಿತಿ ಇರುವಾಗಲೂ ಆಕ್ಸಿಜನ್​ ಸಿಲಿಂಡರ್​ಗಳನ್ನು ಕಳವು ಮಾಡಿದ ಪ್ರಕರಣವೂ ವರದಿಯಾಗಿದೆ. ಅದರಲ್ಲೂ ಆರೋಗ್ಯ ಸಚಿವರ ಉಸ್ತುವಾರಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೇ ಇಂಥದ್ದೊಂದು ಘಟನೆ ಸಂಭವಿಸಿದೆ.
ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಯಲ್ಲಿ ರಾತ್ರಿ ವೇಳೆ ಹತ್ತು ಆಕ್ಸಿಜನ್ ಸಿಲಿಂಡರ್​​ಗಳು ಕಳವಾಗಿದ್ದು, ಮಾರನೇ ದಿನ ಬೆಳಕಿಗೆ ಬಂದಿದೆ. ಈ ಬಗ್ಗೆ ಆಸ್ಪತ್ರೆಯ ವೈದ್ಯರು ಚಿಕ್ಕಬಳ್ಳಾಪುರ ಪೊಲೀಸರಿಗೆ ದೂರು ನೀಡಿದ್ದು, ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಕೆಎಎಸ್ ಅಧಿಕಾರಿ ಚೇಂಬರ್‌ನ ವಾಷ್ ರೂಮ್​ನಲ್ಲಿ ದಂಪತಿಯ ಶವ ಪತ್ತೆ; ಭೀಕರವಾಗಿ ಕೊಲೆ ಮಾಡಿದ ಹಂತಕರು…
ಆಕ್ಸಿಜನ್ ಸಿಲಿಂಡರ್​ಗಳನ್ನು ಇರಿಸಲಾಗಿದ್ದ ಕೋಣೆಯ ಕೀಗಳು ಡಾ.ವಿಜಯಲಕ್ಷ್ಮೀ, ಡಿ ದರ್ಜೆ ನೌಕರ ಮುನಿರಾಜು ಅವರ ಬಳಿ ಮಾತ್ರ ಇವೆ. ಅಲ್ಲದೆ ಈ ಕಳ್ಳತನದ ಹಿಂದೆ ಆಸ್ಪತ್ರೆ ಸಿಬ್ಬಂದಿಯ ಕೈವಾಡ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಎಲ್ಲೆಡೆ ಆಕ್ಸಿಜನ್​ ಸಿಲಿಂಡರ್​ಗೆ ಬೇಡಿಕೆ ಹೆಚ್ಚಾಗಿರುವುದರಿಂದ ದುಬಾರಿ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಕಳವು ನಡೆದಿರಬಹುದು ಎನ್ನಲಾಗಿದೆ.
ಧೂಮಪಾನಿಗಳು-ಸಸ್ಯಾಹಾರಿಗಳಲ್ಲಿ ಕೋವಿಡ್ ಸೋಂಕು ಸಾಧ್ಯತೆ ಕಡಿಮೆ; ಸಿಎಸ್​ಐಆರ್ ಸಮೀಕ್ಷೆಯಲ್ಲಿ ಬಹಿರಂಗ

ಭಾರತಕ್ಕೆ ಕರೊನಾ ಮೂರನೇ ಅಲೆ ಪ್ರವೇಶ ಯಾವತ್ತು ಗೊತ್ತಾ?; ಇಲ್ಲಿದೆ ನೋಡಿ ಮಾಹಿತಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
