ಬೆಂಗಳೂರು:ರಾಜ್ಯದಲ್ಲಿನ ಆಸ್ಪತ್ರೆಗಳಿಗೆ ಆಮ್ಲಜನಕದ ಸಮರ್ಪಕ ಪೂರೈಕೆ ಹಾಗೂ ಕೇಂದ್ರ ಸರ್ಕಾರದ ಆದೇಶದಂತೆ ಅದರ ಬೆಲೆ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಕರೊನಾ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವಿಕ್ರಂ ಹುಯಿಲಗೋಳ ಲಿಖಿತ ಹೇಳಿಕೆ ಸಲ್ಲಿಸಿ, ರಾಜ್ಯದಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಪ್ರತಿದಿನ ಅಂದಾಜು 236.56 ಮೆಟ್ರಿಕ್ ಟನ್ ಆಮ್ಲಜನಕ ಬೇಡಿಕೆ ಇದ್ದು, ಸದ್ಯ 376 ಮೆಟ್ರಿಕ್ ಲಭ್ಯತೆ ಇದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಅದಕ್ಕೆ ನ್ಯಾಯಪೀಠ, ಆಮ್ಲಜನಕ ಸಾಕಷ್ಟು ಪ್ರಮಾಣದಲ್ಲಿದೆ ಎಂದಾದರೂ, ಅದು ಆಸ್ಪತ್ರೆಗಳಿಗೆ, ಅದರಲ್ಲೂ ಗ್ರಾಮೀಣ ಭಾಗಗಳ ಆಸ್ಪತ್ರೆಗಳಿಗೆ ಸಮರ್ಪಕವಾಗಿ ಪೂರೈಕೆಯಾಗುತ್ತಿದೆಯೇ, ಅದರ ಬೆಲೆ ನಿಯಂತ್ರಣಕ್ಕೆ ಯಾವ ಕ್ರಮ ಕೈಗೊಳ್ಳಲಾಗಿದೆ, ಯಾವ ಪ್ರಾಧಿಕಾರ ಬೆಲೆ ನಿಯಂತ್ರಿಸುತ್ತದೆ ಎಂಬೆಲ್ಲ ಅಂಶಗಳ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ಅ.6ಕ್ಕೆ ವಿಚಾರಣೆ ಮುಂದೂಡಿತು.
ದೇಶದಲ್ಲಿ ಕೊನೆಗೂ ತಗ್ಗಿತು ಕರೊನಾ ವೈರಸ್‌ನ ವೇಗ…

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × four =
Remember me
