ಬೆಂಗಳೂರು:ರಾಜ್ಯ ಒಕ್ಕಲಿಗರ ಸಂಘದ ಚುನಾವಣಾಧಿಕಾರಿ ಆಗಿ ಐಎಎಸ್​ ಅಧಿಕಾರಿ ಪಿ.ಎನ್​. ರವೀಂದ್ರ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಚುನಾವಣಾಧಿಕಾರಿಯನ್ನು ನೇಮಕ ಮಾಡುವಂತೆ ಸಂಘದ ಆಡಳಿತಾಧಿಕಾರಿ ಸಹಕಾರ ಸಂಘಗಳ ನಿಬಂಧಕರಿಗೆ ಪತ್ರ ಬರೆದಿದ್ದರು. ನಿಬಂಧಕರು ಸರ್ಕಾರಕ್ಕೆ ಪ್ರಸ್ತವಾನೆಯನ್ನು ಕಳುಹಿಸಿದ್ದರು.
ರಾಜ್ಯ ಒಕ್ಕಲಿಗರ ಸಂಘಕ್ಕೆ 3 ತಿಂಗಳ ಒಳಗೆ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿನ್ನೆಯಷ್ಟೇ ನಿರ್ದೇಶನ ನೀಡಿತ್ತು. ಸಂಘಕ್ಕೆ ಚುನಾವಣೆ ನಡೆಸಲು ನಿರ್ದೇಶಿಸುವಂತೆ ಕೋರಿ ಚಿತ್ರ ನಿರ್ಮಾಪಕ ಕೃಷ್ಣೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಪೀಠ, ಈ ಆದೇಶ ಮಾಡಿತ್ತು.
ಅರ್ಜಿದಾರರ ಪರ ವಕೀಲ ಧರ್ಮಪಾಲ ಗೌಡ ವಾದ ಮಂಡಿಸಿ, ಸಂಘದ ಪದಾಧಿಕಾರಿಗಳ ನಡುವೆ ಉಂಟಾದ ಭಿನ್ನಾಭಿಪ್ರಾಯಗಳಿಂದ ಹಿಂದಿನ ಕಾರ್ಯಕಾರಿ ಸಮಿತಿಯನ್ನು ಪದಚ್ಯುತಿಗೊಳಿಸಲಾಗಿತ್ತು. ಬಳಿಕ ಸಂಘದ ಕೆಲಸ-ಕಾರ್ಯಗಳ ನಿರ್ವಹಣೆಗೆ ನಿವೃತ್ತ ಐಪಿಎಸ್ ಅಧಿಕಾರಿ ಶಂಕರಲಿಂಗೇಗೌಡ ಅವರನ್ನು ಸರ್ಕಾರ ನೇಮಕ ಮಾಡಿತ್ತು. ಕಾನೂನು ಪ್ರಕಾರ ಆಡಳಿತಾಧಿಕಾರಿ ನೇಮಕಗೊಂಡ 6 ತಿಂಗಳ ನಂತರ ಅವರ ಅವಧಿ ಹಾಗೂ ಅಧಿಕಾರ ಪೂರ್ಣಗೊಳ್ಳುತ್ತದೆ. ಅಷ್ಟರೊಳಗೆ ಚುನಾವಣೆ ನಡೆಸಬೇಕಾಗುತ್ತದೆ. ಆದರೆ, ಕಳೆದ ಎರಡೂವರೆ ವರ್ಷಗಳಿಂದಲೂ ಆಡಳಿತಾಧಿಕಾರಿಯ ಅವಧಿ ವಿಸ್ತರಿಸಿಕೊಂಡು ಬರಲಾಗುತ್ತಿದೆಯೇ ಹೊರತು, ಸಂಘಕ್ಕೆ ಚುನಾವಣೆ ನಡೆಸುತ್ತಿಲ್ಲ. ಆದ್ದರಿಂದ, ಕೂಡಲೇ ಚುನಾವಣೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದರು.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
10 ಲಕ್ಷ ಜನರಿಗೆ ಒಟ್ಟು 1,500 ಕೋಟಿ ರೂ. ಮೋಸ; ಬೆಂಗಳೂರಿನ ಕಂಪನಿಯ 24 ಜನರನ್ನು ಬಂಧಿಸಿದ ಸೈಬರಾಬಾದ್ ಪೊಲೀಸರು

‘ಕಾಲೂರಲು’ ಸಿಗದ ‘ಬೆಂ’ಬಲ; ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ರಾಜಕೀಯ ನಿವೃತ್ತಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − six =
Remember me
