ಆನೇಕಲ್:ಪಾದರಾಯನಪುರದಲ್ಲಿ ಗಲಭೆ ಮಾಡಿದ ಆರೋಪಿಗಳನ್ನು ರಾಮನಗರ ಜೈಲಿಗೆ ವರ್ಗಾವಣೆ ಮಾಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ನಿನ್ನೆ ಆತಂಕ ವ್ಯಕ್ತಪಡಿಸಿದ್ದರು. ಅಲ್ಲಿ ಇದುವರೆಗೂ ಒಂದೂ ಕರೊನಾ ಪ್ರಕರಣ ಪತ್ತೆಯಾಗಿಲ್ಲ. ಈಗ ಪಾದರಾಯನಪುರದ ಆರೋಪಿಗಳಲ್ಲಿ ಯಾರಿಗಾದರೂ ಕೊವಿಡ್​-19 ಇದ್ದು, ಅವರನ್ನು ಅಲ್ಲಿಗೆ ಸ್ಥಳಾಂತರ ಮಾಡಿದರೆ ಅಪಾಯ ಆದರೆ ಏನು ಮಾಡುವುದು ಎಂದು ಪ್ರಶ್ನಿಸಿದ್ದರು.
ಇದೀಗ ಸಂಸದ ಡಿ.ಕೆ.ಸುರೇಶ್​ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರ ರಾಜಕೀಯ ದ್ವೇಷಕ್ಕಾಗಿ ಪಾದರಾಯನಪುರ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರ ಮಾಡಿದೆ ಎಂದು ಹೇಳಿದ್ದಾರೆ.
ರಾಮನಗರ ಗ್ರೀನ್​ ಝೋನ್​ನಲ್ಲಿದೆ. ಇದೀಗ ಪಾದರಾಯನಪುರ ಆರೋಪಿಗಳನ್ನೇಕೆ ಇಲ್ಲಿಗೆ ಕಳಿಸಬೇಕಿತ್ತು? ಸರ್ಕಾರ ರಾಮನಗರದ ಜನರನ್ನು ಆತಂಕಕ್ಕೀಡು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಹಾಗೇ ಮೃತ ಪತ್ರಕರ್ತ ಹನುಮಂತು ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. (ದಿಗ್ವಿಜಯ ನ್ಯೂಸ್​)
ಪಾಕ್‌ ಪ್ರಧಾನಿಯ ನಿದ್ದೆ ಕಸಿದ ಕರೊನಾ- ಸ್ವಯಂ ಕ್ವಾರಂಟೈನ್‌ನಲ್ಲಿ ಇಮ್ರಾನ್‌ ಖಾನ್‌: ವೈರಸ್‌ ಪರೀಕ್ಷೆಯ ವರದಿ ಬರುವವರೆಗೆ ಎದೆಯಲ್ಲಿ ಡವಡವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + one =
Remember me
