ಬೆಂಗಳೂರು: ಪಾದರಾಯನಪುರದಲ್ಲಿ ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರನ್ನು ಕ್ವಾರಂಟೈನ್ ಮಾಡುವುದನ್ನು ವಿರೋಧಿಸಿ ಪುಂಡಾಟಿಕೆ ನಡೆಸಿದ್ದ ವ್ಯಕ್ತಿಯಿಂದ ಮೂವರಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.
ಇದನ್ನೂ ಓದಿ:ಕರೊನಾ ಬಿಕ್ಕಟ್ಟು ನಿರ್ವಹಣೆಗಾಗಿ 20 ಲಕ್ಷ ಕೋಟಿ ರೂ.ವಿಶೇಷ ಆರ್ಥಿಕ ಪ್ಯಾಕೇಜ್​ ಘೋಷಿಸಿದ ಪ್ರಧಾನಿ ಮೋದಿ
ಸೀಲ್​ಡೌನ್ ಮಾಡಿರುವ ಕ್ರಮ ಹಾಗೂ ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರನ್ನು ಕ್ವಾರಂಟೈನ್ ಮಾಡಲು ಕರೆದೊಯ್ಯುವುದನ್ನು ವಿರೋಧಿಸಿ ಪಾದರಾಯನಪುರದಲ್ಲಿ ನೂರಾರು ಜನರು ಬ್ಯಾರಿಕೇಡ್ ಮುರಿದು, ಆರೋಗ್ಯ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್ ಇಲಾಖೆ 126 ವಶಕ್ಕೆ ಪಡೆದು ನಗರದ ಹಜ್ ಭವನ ಹಾಗೂ ಕೆಲವರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಕ್ವಾರಂಟೈನ್ ಮಾಡಿತ್ತು. ಇವರಲ್ಲಿ 6 ಜನರಿಗೆ ಸೋಂಕು ಪತ್ತೆಯಾಗಿತ್ತು. ಮಂಗಳವಾರ ಪುಂಡನೊಬ್ಬನ ಸಂಪರ್ಕ ದಲ್ಲಿದ್ದ ಮೂವರಲ್ಲಿ ಸೋಂಕು ದೃಢವಾಗಿದೆ.
ಇದನ್ನೂ ಓದಿ:ಠಾಣೆಯಲ್ಲೇ ಆತ್ಮಹತ್ಯೆಗೆ ಮಹಿಳೆ ಯತ್ನ
ರಾಜ್ಯದಲ್ಲಿ ಕರೊನಾ ಸೋಂಕಿನ ಸ್ಥಳವಾಗಿ ಗುರುತಿಸಿಕೊಂಡಿರುವ ಪಾದರಾಯನಪುರದಲ್ಲಿ ಸೋಂಕಿತರ ಸಂಖ್ಯೆ ಪ್ರತಿನಿತ್ಯ ಏರಿಕೆಯಾಗುತ್ತಿದೆ. ಬಿಬಿಎಂಪಿ ಹಾಗೂ ಸರ್ಕಾರದಿಂದ ಯಾವುದೇ ಕ್ರಮ ಕೈಗೊಂಡರೂ ಸೋಂಕು ನಿಯಂತ್ರಣ ಕಾರ್ಯ ಯಶಸ್ವಿಯಾಗುತ್ತಿಲ್ಲ. ಅಲ್ಲದೆ, ಇಲ್ಲಿನ ಜನರು ಸೀಲ್​ಡೌನ್ ಪ್ರದೇಶ ಎನ್ನುವುದನ್ನು ಮರೆತು ಓಡಾಡುತ್ತಿರುವುದು ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇದನ್ನೂ ಓದಿ:ಸ್ಥಳೀಯ ಉತ್ಪನ್ನಗಳ ಮಹತ್ವ ತಿಳಿಸಿದೆ ಕೊವಿಡ್​-19, ಸ್ವಾವಲಂಬಿಯಾಗುವುದೇ ಗುರಿ: ಪ್ರಧಾನಿ ಮೋದಿ
ರಾಂಡಂ ಪರೀಕ್ಷೆಯಿಂದ 7 ಸೋಂಕಿತರು ಪತ್ತೆ:ಬೆಂಗಳೂರಿನಲ್ಲಿ ಹೆಚ್ಚು ಕರೊನಾ ಸೋಂಕಿತರು ಕಾಣಿಸಿಕೊಂಡಿದ್ದ ಹೊಂಗಸಂದ್ರ ಹಾಗೂ ಪಾದರಾಯನಪುರದಲ್ಲಿ ಬಿಬಿಎಂಪಿ ರ್ಯಾಂಡಂ ಕರೊನಾ ತಪಾಸಣೆ ಕೈಗೆತ್ತಿಕೊಂಡಿತ್ತು. ಇದರಲ್ಲಿ ಪಾದರಾಯನಪುರದಲ್ಲಿ 130 ಜನರನ್ನು ರ್ಯಾಂಡಂ ಪರೀಕ್ಷೆಗೆ ಒಳಪಡಿಸಲಾಗಿದ್ದು, 7 ಜನರಿಗೆ ಸೋಂಕು ದೃಢಪಟ್ಟಿದೆ. ಈವರೆಗೆ ಪಾದರಾಯನಪುರದಲ್ಲಿ ಸೋಂಕಿತರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ:ಅಗತ್ಯವಿಲ್ಲದಿದ್ದರೂ ಆನ್‌ಲೈನ್ ಶಿಕ್ಷಣ ನೀಡಿ ಶೋಷಿಸುವ ಶಾಲೆಗಳಿಗೆ ಸಚಿವರ ಎಚ್ಚರಿಕೆ
ಅವಳಿ ಮಕ್ಕಳಿಗೆ ಸೋಂಕಿಲ್ಲ:ಪಾದರಾಯನಪುರದಲ್ಲಿ ಸೋಂಕಿಗೆ ಒಳಗಾಗಿದ್ದ ಇಬ್ಬರು ಮಹಿಳೆಯರಿಗೆ ಶನಿವಾರ ಹೆರಿಗೆಯಾಗಿತ್ತು. ಅದರಲ್ಲಿ ಒಬ್ಬರಿಗೆ ಅವಳಿ ಮಕ್ಕಳು ಜನಿಸಿದ್ದವು. ಮೂರು ಮಕ್ಕಳನ್ನು ವಾಣಿವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಿ ಗಂಟಲು ದ್ರವ ಸಂಗ್ರಹಿಸಿ ಪ್ರತ್ಯೇಕ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಅದೃಷ್ಟವಶಾತ್ ಮಕ್ಕಳಿಗೆ ಸೋಂಕು ದೃಢಪಟ್ಟಿಲ್ಲ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಬಿ.ಕೆ. ವಿಜೇಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ:ಆನ್​ಲೈನ್​ ಪಾಠದ ಹೆಸರಲ್ಲಿ ಶುಲ್ಕ ವಸೂಲಿಗೆ ನಡೆಯುತ್ತಿದೆ ತಂತ್ರ, ಶಿಕ್ಷಣ ಸಂಸ್ಥೆಗಳಿಗೆ ಇಲಾಖೆ ನೀಡಿರುವ ಎಚ್ಚರಿಕೆ ಏನು?
ಹೊಂಗಸಂದ್ರದಲ್ಲಿ ಮತ್ತೊಬ್ಬನಿಗೆ ಸೋಂಕು:ಬೊಮ್ಮನಹಳ್ಳಿ ವಲಯದ ಹೊಂಗಸಂದ್ರ ವಾರ್ಡ್​ನ ಮಂಗಮ್ಮನಪಾಳ್ಯ ದಲ್ಲಿ ಪ್ರಯಾಣ ಮಾಡದ ಹಾಗೂ ಸೋಂಕಿತ ವ್ಯಕ್ತಿಗಳೊಂದಿಗೆ ಸಂಪರ್ಕವಿರದ 35 ವರ್ಷದ ಆಟೋ ಚಾಲಕನಿಗೆ ಸೋಂಕು ದೃಢಪಟ್ಟಿದೆ. ಆದರೆ, ಕೆಲ ದಿನಗಳ ಹಿಂದೆ ಸೋಂಕಿಗೆ ಒಳಗಾಗಿದ್ದ (ಪಿ-654) ವ್ಯಕ್ತಿ ಜತೆ ಸಂಪರ್ಕ ಹೊಂದಿರಬಹುದು ಎಂಬ ಸಂಶಯವಿದೆ. ಚಾಲಕನ ಜತೆ ಸಂಪರ್ಕ ಹೊಂದಿದವರನ್ನು ಪತ್ತೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
54 ವರ್ಷದ ಮಹಿಳೆಗೆ ಅವಳಿ ಮಕ್ಕಳು, ಪತಿಗೆ 64 ವರ್ಷ- ದಂಪತಿಯ ಬದುಕೇ ಒಂದು ಕರುಣಾಜನಕ ಕಥೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + sixteen =
Remember me
