ನವದೆಹಲಿ:75ನೇ ಗಣರಾಜ್ಯೋತ್ಸವ ಮುನ್ನಾ ದಿನ ಕೇಂದ್ರ ಸರ್ಕಾರವು 2024ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಲವಾರು ಗಣ್ಯರ ಪೈಕಿ ವಿವಿಧ ಕ್ಷೇತ್ರಗಳಲ್ಲಿನ ಕೊಡುಗೆಗಾಗಿ ಕರ್ನಾಟಕದ ಇಬ್ಬರು ಈ ಬಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾಗಿರುವ ಪದ್ಮ ಪ್ರಶಸ್ತಿಯನ್ನು ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ – ಹೀಗೆ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. ಕಲೆ-ಸಾಹಿತ್ಯ, ಸಮಾಜ ಸೇವೆ, ಸಾರ್ವಜನಿಕ ವ್ಯವಹಾರಗಳು ಇತ್ಯಾದಿ ಕ್ಷೇತ್ರಗಳಲ್ಲಿ ನಿಸ್ವಾರ್ಥ ಸೇವೆಯೊಂದಿಗೆ ಕೊಡುಗೆಗಳನ್ನು ನೀಡಿದ ವ್ಯಕ್ತಿಗಳಿಗೆ ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ.
ಈ ಪ್ರಶಸ್ತಿಗಳನ್ನು ಭಾರತದ ರಾಷ್ಟ್ರಪತಿಗಳು ರಾಷ್ಟ್ರಪತಿ ಭವನದಲ್ಲಿ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಸಮಾರಂಭ ಆಯೋಜಿಸಿ ಪ್ರಶಸ್ತಿ ನೀಡುತ್ತಾರೆ. ಈ ಬಾರಿ 34 ಮಂದಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಕರ್ನಾಟಕದ ಮೈಸೂರು ಮೂಲದ ಸೋಮಣ್(66) ಹಾಗೂ ಪ್ರೇಮಾ ದೇವರಾಜ್​ (72) ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇದನ್ನೂ ಓದಿ:ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ಇತಿಹಾಸ ರಚಿಸಿದ ರವೀಂದ್ರ ಜಡೇಜಾ
ಮೈಸೂರು ಮೂಲದವರಾದ ಸೋಮಣ್ಣ (66) ಜೇನು ಕುರುಬ ಬುಡಕಟ್ಟು ಸಮುದಾಯದ ಹಕ್ಕುಗಳಿಗಾಗಿ ಕಳೆದ 4 ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಜನರ ರಕ್ಷಣೆ ಹಾಗೂ ಸುರಕ್ಷತೆ ಬಗ್ಗೆ ಇವರು ನಿರಂತರವಾಗಿ ಸರ್ಕಾರದ ಗಮನವನ್ನು ಸೆಳೆಯುತ್ತ ಬಂದಿದ್ದಾರೆ.
ವೃತ್ತಿಯಲ್ಲಿ ವೈದ್ಯರಾಗಿರುವ ಪ್ರೇಮಾ ದೇವರಾಜ್​ (72) ಅವರು ಅಗ್ನಿ ರಕ್ಷಾ ಎಂಬ ಸರ್ಕಾರೇತರ ಸಂಸ್ಥೆಯ ಮೂಲಕ ಸುಟ್ಟ ಗಾಯಗಳಿಗೆ ತುತ್ತಾದ 25, 000ಕ್ಕೂ ಅಧಿಕ ಮಂದಿಗೆ ಉಚಿತ ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ. ಪ್ಲಾಸ್ಟಿಕ್ ಸರ್ಜರಿ ಕುರಿತು 3 ಪುಸ್ತಕಗಳನ್ನು ಬರೆದಿದ್ದಾರೆ. 8 ನೇ ವಯಸ್ಸಿಗೆ ಗ್ಯಾಸ್​ ದುರಂತದಲ್ಲಿ ಶೇ.50ರಷ್ಟು ಸುಟ್ಟ ಗಾಯಗಳಿಂದ ಬದುಕುಳಿದಿದ್ದ ಇವರು ಬಾಲ್ಯದಲ್ಲಿ 14 ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದಾರೆ. ವೆಲ್ಲೂರು ಕಾಲೇಜಿನಲ್ಲಿ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − seven =
Remember me
