ಬೆಂಗಳೂರು:ಪಾಕಿಸ್ತಾನದ ರಾಷ್ಟ್ರಧ್ವಜ ಹೋಲುವ ಬಾವುಟವನ್ನು ಕಾರಿಗೆ ಸಿಕ್ಕಿಸಿಕೊಂಡು ಹೋಗುತ್ತಿದ್ದ ಕಾರು ಚಾಲಕನಿಗೆ ಎಲೆಕ್ಟ್ರಾನಿಕ್ಸ್ ಸಿಟಿ ಸಂಚಾರ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಸೆ.8ರಂದು ಬೆಳಗ್ಗೆ 11.45ರಲ್ಲಿ ಹೊಸೂರು ರಸ್ತೆಯ ವೀರಸಂದ್ರ ಸರ್ಕಲ್​ನಲ್ಲಿ ತಮಿಳುನಾಡು ಮೂಲದ ಫಾರ್ಚುನರ್ ಕಾರು ನಿಂತಿತ್ತು. ಪಾಕಿಸ್ತಾನ ರಾಷ್ಟ್ರಧ್ವಜಕ್ಕೆ ಹೋಲುವ ಬಾವುಟ ಅಳವಡಿಸಿರುವುದು ಸಿಬ್ಬಂದಿ ಗಮನಕ್ಕೆ ಬಂದಿದೆ. ಕರ್ತವ್ಯ ನಿರ್ವಹಿಸುತ್ತಿದ್ದ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆ ಎಎಸ್​ಐ ರಾಜು ಅವರು ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಹಸಿರುಬಣ್ಣದ ಬಾವುಟ ಕಂಡು ಬಂದಿದೆ.
ಈ ವೇಳೆ ಚಾಲಕನನ್ನು ಕಾರಿನಿಂದ ಕೆಳಗಿಳಿಸಿ ಬಾವುಟ ತೆಗೆಸಿದ್ದಾರೆ. ಬಳಿಕ ರಾಷ್ಟ್ರಧ್ವಜವನ್ನು ಹಾಕಿಸಿ, ಇನ್ನೊಮ್ಮೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − eight =
Remember me
