ಬೆಳಗಾವಿ:ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಆಸೀಫ್ ಸೇಠ್(ರಾಜು) ಗೆಲುವಿನ ಸಂಭ್ರಮದಲ್ಲಿ ಪಾಲ್ಗೊಂಡ ಕೆಲ ಕಿಡಿಗೇಡಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ.
ಶನಿವಾರ ಮಧ್ಯಾಹ್ನ ಅಸೀಫ್ ಗೆಲುವು ಖಾತ್ರಿ ಆಗುತ್ತಿದ್ದಂತೆಯೇ ಅಪಾರ ಸಂಖ್ಯೆಯ ಯುವಕರು ಮತ ಎಣಿಕೆ ಕೇಂದ್ರದ ಸುತ್ತ ಸೇರಿದ್ದರು. ಬಳಿಕ ಬಣ್ಣಗಳನ್ನು ಎರಚಿ, ಸಂಗೀತ ಹಾಕಿಕೊಂಡು ಗೆಲುವಿನ ಕೇಕೆ ಹಾಕಿದ್ದಾರೆ. ಈ ವೇಳೆ ಈ ವೇಳೆ ಕಾಂಗ್ರೆಸ್‌ ಧ್ವಜ ಹಿಡಿದು ಬಂದ ಕೆಲವರು ‘ಜಿಂದಾಬಾದ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್’ ಎಂದು ಮೂರು ಬಾರಿ ಘೋಷಣೆ ಮೊಳಗಿಸಿದ್ದಾರೆ.
ಇದನ್ನೂ ಓದಿ:ಕರ್ನಾಟಕ ವಿಧಾನಸಭೆ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಸಿದ್ದರಾಮಯ್ಯ
ಪಾಕಿಸ್ತಾನ ಅಲ್ಲ.. ಬೆಳಗಾವಿ ಅಂತೇ..Game Started Now..😥pic.twitter.com/GU2hD5lVXP— ಶಕುಂತಲ ನಟರಾಜ್ (@ShakunthalaHS)May 13, 2023
ಪಾಕಿಸ್ತಾನ ಅಲ್ಲ.. ಬೆಳಗಾವಿ ಅಂತೇ..Game Started Now..😥pic.twitter.com/GU2hD5lVXP
ಈ ವೇಳೆ ಹತ್ತಿರದಲ್ಲೇ ಇದ್ದ ಕೆಲವು ಪೊಲೀಸರು ಯುವಕರ ಬಳಿ ಹೋಗಿ ಎಚ್ಚರಿಕೆ ನೀಡಿದ್ದಾರೆ. `ಈ ರೀತಿ ಬೇರೆ ಮಾತು ತೆಗೆದರೆ ಪರಿಸ್ಥಿತಿ ನೆಟ್ಟಗೆ ಇರುವುದಿಲ್ಲ’ ಎಂದೂ ಖಡಕ್ ಸೂಚನೆ ನೀಡಿದ ಘಟನೆ ನಡೆದಿದೆ. ಆದರೆ, ಘೋಷಣೆ ಕೂಗಿದ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಿಲ್ಲ. ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಡಿಯೋ ತುಣುಕು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರ ದೀರ್ಘಾವಧಿ ಆಡಳಿತ ನಡೆಸಲ್ಲ, ಡಿಕೆಶಿ-ಸಿದ್ದರಾಮಯ್ಯ ಒಬ್ಬರ ಮೇಲೊಬ್ಬರು ಬಂಡಾಯ ಏಳ್ತಾರೆ; ಯತ್ನಾಳ್
“ಆರ್‌ಪಿಡಿ ಕಾಲೇಜು ಬಳಿ ನಡೆದ ವಿಜಯೋತ್ಸವ ವೇಳೆ ಪಾಕಿಸ್ತಾನ್‌ ಜಿಂದಾಬಾಂದ್ ಎಂದು ಕೆಲವರು ಕೂಗಿದ್ದಾರೆ. ಐನೂರಕ್ಕೂ ಹೆಚ್ಚು ಯುವಕರು ಅಲ್ಲಿದ್ದರು. ಈ ವೇಳೆ ಎಲ್ಲರೂ ಮುಖಕ್ಕೆ ಬಣ್ಣ ಬಳಿದುಕೊಂಡಿದ್ದರು. ಯಾರು ಘೋಷಣೆ ಕೂಗಿದ್ದು ಎಂದು ಗುರುತಿಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಟಿಳಕವಾಡಿ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಸಿಕೊಳ್ಳಲಾಗುವುದು’ ಎಂದು ಇನ್‌ಸ್ಪೆಕ್ಟರ್ ದಯಾನಂದ ಶೇಗುಣಸಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
