ಬೆಂಗಳೂರು:7ನೇ ವೇತನ ಆಯೋಗದ ವರದಿ ಜಾರಿ ವಿಚಾರದಲ್ಲಿ ರಾಜ್ಯ ಸರ್ಕಾರ, ‘ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ’ಎಂಬಂತೆ ನಡೆದುಕೊಂಡಿದ್ದು,ಸರ್ಕಾರ ನಡೆ ವಿರುದ್ಧ ರಾಜ್ಯದ 10 ಮಹಾನಗರ ಪಾಲಿಕೆ ನೌಕರರು ತೀವ್ರವಾಗಿ ಆಕ್ರೋಶ ಹೊರಹಾಕುತ್ತಿದ್ದಾರೆ.
7ನೇ ವೇತನ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮಾ.1ರಂದು ಕರೆ ನೀಡಿದ್ದ ಮುಷ್ಕರದಲ್ಲಿ ಮಹಾನಗರ ಪಾಲಿಕೆ ನೌಕರರು ಭಾಗಿಯಾಗಿ ತೀವ್ರ ಪ್ರತಿಭಟನೆ ನಡೆಸಿದ್ದರು. ಅದರೆ, ಮಹಾನಗರ ಪಾಲಿಕೆ ನೌಕರರನ್ನು ಹೊರಗಿಟ್ಟ ಹಿಂದಿನ ಸರ್ಕಾರ, ಬರೀ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯವಾಗುವಂತೆ ಮಾ.1ರಿಂದ ಜಾರಿಗೆ ಬರುವಂತೆ ಶೇ.17 ಮಧ್ಯಂತರ ಪರಿಹಾರ ಮಂಜೂರು ಮಾಡಿ ಆದೇಶ ಹೊರಡಿಸಿತ್ತು.
ಇದೇ ವೇಳೆ ಮಹಾನಗರ ಪಾಲಿಕೆ ನೌಕರರಿಗೆ ಹಾಗೂ ಪುರಸಭೆ/ನಗರಸಭೆ ನೌಕರರಿಗೆ ಪ್ರತ್ಯೇಕವಾಗಿ ಮಂಜೂರಾತಿಗೆ ನಗರಾಭಿವೃದ್ಧಿ ಹಾಗೂ ಪೌರಾಡಳಿತ ಇಲಾಖೆಯಿಂದ ಅನುಮತಿ ಪಡೆಯುವಂತೆ ಸರ್ಕಾರ ಆದೇಶಿಸಿತ್ತು. ಈ ಆದೇಶವನ್ನು ಅನುಷ್ಠಾನಕ್ಕೆ ತರುವಂತೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಹಾಗೂ ಪೌರಾಡಳಿತ ಇಲಾಖೆ ನಿರ್ದೇಶಕರಿಗೆ ಎರಡು ತಿಂಗಳಿಂದ ಸತತವಾಗಿ ಮನವಿ ಪತ್ರ ನೀಡಿದ್ದರೂ ಇದಕ್ಕೆ ಸ್ಪಂದಿಸುತ್ತಿಲ್ಲ.
ಮಾ.1ರಂದು ಕರೆ ನೀಡಿದ್ದ ಮುಷ್ಕರದಲ್ಲಿ ಸರ್ಕಾರಿ ನೌಕರರು ಗೈರಾಗಿ ಮನೆಯಲ್ಲಿದ್ದರು. ಆದರೆ, ಮಹಾನಗರ ಪಾಲಿಕೆ ನೌಕರರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ಮಾಡಿದ್ದರಿಂದ ಸರ್ಕಾರಿ ನೌಕರರಿಗೆ ಮಾತ್ರ ಇದರ ಲ ಸಿಗುವಂತಾಗಿದೆ. ಆದರೆ, ನ್ಯಾಯಯುತವಾಗಿ ಸಿಗಬೇಕಿದ್ದ ಮಧ್ಯಂತರ ಪರಿಹಾರದಲ್ಲಿ ನಮ್ಮನ್ನು ಕಡೆಗಣಿಸಲಾಗಿದೆ. ಆದ್ದರಿಂದ, ಬರುವ ದಿನಗಳಲ್ಲಿ ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಹೇಳಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + eight =
Remember me
