ಬೆಂಗಳೂರು:ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಸೇರಿಸುವ ವಿಚಾರವಾಗಿ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಶಾಸಕರ ನಿಯೋಗವು ಶುಕ್ರವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಬೇಡಿಕೆ ಸಲ್ಲಿಸಿತು.
ಕುಮಾರಕೃಪಾ ಅತಿಥಿ ಗೃಹದಲ್ಲಿ ನಿಯೋಗವು ಡಿಸಿಎಂ ಡಿಕೆಶಿ ಅವರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸಿತು. ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರಿಸಲು ನಿಯೋಗ ಮನವಿ ಮಾಡಿದೆ.
ಇದನ್ನೂ ಓದಿ:ಪರಮೇಶ್ವರ್​ ಗೃಹ ಖಾತೆಯನ್ನು ಪ್ರಿಯಾಂಕ ಖರ್ಗೆಗೆ ಲೀಸ್​ ಕೊಟ್ಟಿದ್ಧಾರೆ: ನಳಿನ್​ ಕುಮಾರ್​ ಕಟೀಲ್​
ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು. ಇದರಿಂದ ಸಮುದಾಯ ಮುಖ್ಯವಾಹಿನಿಗೆ ಬರಲು ಅನುಕೂಲವಾಗುತ್ತದೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ಧಾರೆ.
ನಿಯೋಗದಲ್ಲಿ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ವೀಣಾ ಕಾಶಪ್ಪನವರ್, ಪ್ರಸಾದ್ ಅಬ್ಬಯ್ಯ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 2 =
Remember me
