ಬೆಳಗಾವಿ:ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಲು ಡಿ. 05ರಂದು ಬೆಳಗಾವಿಯಲ್ಲಿ ಸರ್ವಾಪಕ್ಷದಲ್ಲಿರುವ ಪಂಚಮಸಾಲಿ ಸಮುದಾಯದ ಶಾಸಕ ಹಾಗೂ ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಸಮುದಾಯದ ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ನಮಗೆ ನೀಡಿದ್ದ 2ಡಿ ಮೀಸಲಾತಿ ತೃಪ್ತಿ ತಂದಿಲ್ಲ. ಹೊರಾಟ ಮಾಡದೇ ನಮಗೆ ನ್ಯಾಯ ಸಿಗುವುದಿಲ್ಲ ಹಾಗಾಗಿ ಇಷ್ಟಲಿಂಗ ಪೂಜೆಯೊಂದಿಗೆ ಹೋರಾಟವನ್ನು ಆರಂಭಿಸಿದ್ದೇವೆ.
ಇದನ್ನೂ ಓದಿ:ಹೃದಯಾಘಾತದಿಂದ ಶುರುವಾದ ಲವ್​ಸ್ಟೋರಿ; ವಿಚ್ಛೇದನವಾಗಿ 5 ವರ್ಷ ಆದಮೇಲೆ ಪುನಃ ಒಂದಾದ ಜೋಡಿ
ಇದಲ್ಲದೆ ವಿವಿಧ ಜಿಲ್ಲೆಗಳಲ್ಲಿ ಹೆದ್ದಾರಿಯನ್ನು ತಡೆದು ಪ್ರತಿಭಟನೆಯನ್ನು ನಡೆಸಿದ್ದೇವೆ. ಆದರೂ ಇನ್ನೂ ನಮಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಇಂದು ಕಾರ್ಯಕಾರಿಣಿ ನಡೆಸಿ ಡಿ. 05ರಂದು ಸಮುದಾಯದ ಶಾಸಕರು, ಸಚಿವರು ಹಾಗೂ ಮಾಜಿ ಶಾಸಕರೊಂದಿಗೆ ಸರ್ವಪಕ್ಷ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ ಸಭೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸುತ್ತೇವೆ. ಮುಖ್ಯಮಂತ್ರಿಗಳನ್ನು ಕರೆತರುವ ಜವಾಬ್ದಾರಿಯನ್ನು ಐವರು ಸಚಿವರಿಗೆ ವಹಿಸಲಾಗಿದೆ.
ಡಿಸೆಂಬರ್​ 04ರಿಂದ 15ರವರೆಗೂ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, 14ರ ಒಳಗಾಗಿ ಸುವರ್ಣ ವಿಧಾನಸೌಧದ ಎದುರು ಪ್ರತಿಭಟಿಸಿ ಇಷ್ಟಲಿಂಗ ಪೂಜೆ ಮಾಡುತ್ತೇವೆ. ಒಂದು ವೇಳೆ ನಮಗೆ ನ್ಯಾಯ ಸಿಗದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಸಮಾವೇಶ ನಡೆಸಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 11 =
Remember me
