ಬೆಂಗಳೂರು:ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗಬೇಕು ಎಂದು ಅನೇಕ ಸಮಯದಿಂದ ಮಠಾಧಿಪತಿಗಳು ಆಗ್ರಹ ಮಾಡುತ್ತಲೇ ಬಂದಿದ್ದಾರೆ. ಆದರೆ ಸರ್ಕಾರ ಮಾತ್ರ ಮಣಿಯುತ್ತಿಲ್ಲ. ಇದೀಗ ಪಂಚಮಸಾಲಿ ನಿಯೋಗ ಮುಖ್ಯಮಂತ್ರಿ ಬೊಮ್ಮಾಯಿಯನ್ನು ಭೇಟಿ ಮಾಡಿದೆ.
ಮೀಸಲಾತಿ ಸಂಬಂಧಿಸಿದಂತೆ ಮುಖ್ಯಮಂತ್ರಿಯನ್ನು ಪಂಚಮಸಾಲಿ ಮಠಾಧಿಪತಿಗಳ ನಿಯೋಗ ಭೇಟಿ ಮಾಡಿ ಚರ್ಚೆ ನಡೆಸಿದೆ. ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಿಯೋಗ ರೇಸ್ ಕೋರ್ಸ್ ಬಳಿಯ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿದೆ.
ನಿಯೋಗ, ಸಚಿವ ಸಿ.ಸಿ ಪಾಟೀಲ್, ಬಸವನಗೌಡ ಪಾಟೀಲ್ ಯತ್ನಾಳ್, ವಿಜಯಾನಂದ ಕಾಶಪ್ಪನವರ ಮುಂತಾದವರನ್ನು ಭೇಟಿ ಮಾಡಿದ್ದು ಸಿಎಂ ಜೊತೆ ಚರ್ಚೆ ನಡೆಸಿದೆ. ಅನೇಕ ಕಾಲದಿಂದ ಪಂಚಮಸಾಲಿಗೆ 2ಎ ಮೀಸಲಾತಿ ನೀಡುವಂತೆ ಸತತವಾಗಿ ಹೋರಾಟ ಮಾಡಿದರೂ ಸರ್ಕಾರ ಮಾತ್ರ ಮಣಿಯುತ್ತಿಲ್ಲ.
ಹೀಗಾಗಿ ಜಯಮೃತ್ಯುಂಜಯ ಸ್ವ‍ಾಮೀಜಿ ಆಕ್ರೋಶ ಹೊರಹಾಕಿದ್ದು ಹಲವು ಬಾರಿ ಡೆಡ್ ಲೈನ್ ನೀಡಿದ್ರು ಸರ್ಕಾರ ಸ್ಪಂದಿಸಿಲ್ಲ ಎಂದು ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಿಎಂ ಜೊತೆ ಮೀಸಲಾತಿ ಸಂಬಂಧ ಪಂಚಮಸಾಲಿ ನಿಯೋಗ ಮಾತುಕತೆ ನಡೆಸುತ್ತಿದೆ. ಇನ್ನೇನು ಚುನಾವಣೆಯೂ ಹತ್ತಿರದಲ್ಲಿದ್ದು ಪಂಚಮಸಾಲಿ ಸಮುದಾಯದ ಮತಗಳೂ ನಿರ್ಣಾಯಕವಾಗುತ್ತವೆ. ಹೀಗಾಗಿ ಸರ್ಕಾರದ ಮುಂದಿನ ನಡೆ ಏನಾಗಿರಲಿದೆ ಎನ್ನುವುದನ್ನು ಕಾದು ನೊಡಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − twelve =
Remember me
