ಬೆಂಗಳೂರು:ರಾಜ್ಯ ಸರ್ಕಾರದ ಮೇಲೆ ತೀವ್ರ ಒತ್ತಡ ಸೃಷ್ಟಿಸಿರುವ ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರ ಇದೀಗ ಕೇಂದ್ರ ಸರ್ಕಾರದ ಅಂಗಳಕ್ಕೆ ತಲುಪಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜ.19ರಂದು ವಿಜಯಪುರಕ್ಕೆ ಆಗಮಿಸಲಿದ್ದು, ಈ ವೇಳೆ ಮೀಸಲಾತಿ ವಿಚಾರದ ಬಗ್ಗೆ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಸೇರಿ ಸಮುದಾಯದ ಪ್ರಮುಖ ಮುಖಂಡರ ಜತೆ ಚರ್ಚಿಸುವ ಸಾಧ್ಯತೆ ಇದೆ. ಇಲ್ಲವಾದರೆ, ಕೂಡಲಸಂಗಮ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೇರಿ ಸಮುದಾಯದ ಪ್ರಮುಖ ಮುಖಂಡರನ್ನು ಕೇಂದ್ರ ನಾಯಕರು ಕರೆಸಿಕೊಂಡು ಸಮಾಲೋಚಿಸಲಿದ್ದಾರೆ.
ಪ್ರವರ್ಗ ‘3ಬಿ’ನಲ್ಲಿದ್ದ ಲಿಂಗಾಯತ ಸಮುದಾಯವನ್ನು ಪ್ರವರ್ಗ ‘2ಡಿ’ಗೆ ಸೇರಿಸಲಾಗಿತ್ತು. ಆದರೆ, ಹೈಕೋರ್ಟ್ ಇದನ್ನು ರದ್ದುಪಡಿಸಿತ್ತು. ಪೂರ್ಣ ಪ್ರಮಾಣದಲ್ಲಿ ವರದಿ ಬಂದ ಬಳಿಕ ಮೀಸಲಾತಿ ಘೋಷಿಸುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಚುನಾವಣಾ ನೀತಿಸಂಹಿತೆ ಜಾರಿಗೆ ಮುನ್ನ ಸಂಪೂರ್ಣ ವರದಿ ಪಡೆದು ಅದಷ್ಟು ಬೇಗ ಮೀಸಲಾತಿ ಘೋಷಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವುದಕ್ಕಾಗಿ ಸ್ವಾತಂತ್ರ್ಯ ಉದ್ಯಾನದಲ್ಲಿ ಶ್ರೀಗಳು ಮತ್ತೆ ಧರಣಿ ಕುಳಿತಿರುವ ವಿಚಾರವೂ ಹೈಕಮಾಂಡ್ ಗಮನಕ್ಕೆ ಬಂದಿದೆ.
ಹಾಗಾಗಿ, ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೇರೆ ಬೇರೆ ಸಮುದಾಯಗಳ ಮೀಸಲಾತಿಯ ಜಟಿಲ ಸಮಸ್ಯೆ ಶಮನಗೊಳಿಸಲು ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ. ಇದರ ನಡುವೆ ಪಂಚಮಸಾಲಿ ಸಮುದಾಯದ ಮೀಸಲಾತಿಯ ಸಾಧಕ-ಬಾಧಕ ಬಗ್ಗೆ ಸಂಘ ಪರಿವಾರದ ಪ್ರಮುಖ ಮುಖಂಡರೊಬ್ಬರು, ಸೋಮವಾರ ಶ್ರೀಗಳ ಜತೆ ಚರ್ಚಿಸಿ ಅಗತ್ಯ ಮಾಹಿತಿ ಪಡೆದುಕೊಂಡಿದ್ದಾರೆ.
ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರು ನಮಗೆ ಅನೇಕ ಬಾರಿ ನೀಡಿದ ಭರವಸೆ ಈಡೇರಿಲ್ಲ. ಹಾಗಾಗಿ, ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು. ಹಾಲಿ ಸರ್ಕಾರದಲ್ಲಿ ಮಂತ್ರಿಯಾಗಿರುವ ನಮ್ಮ ಸಮುದಾಯದವರು, ಕೇಂದ್ರದ ಮೇಲೆ ಇನ್ನಷ್ಟು ಒತ್ತಡ ಹೇರಬೇಕು. ಪ್ರತಿ ನಿತ್ಯ ಹಲವು ಮಂದಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದರು. ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲೂ ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟ ವಿಸ್ತರಣೆಯಾಗಿದೆ. ಶ್ರೀಗಳು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಸಮುದಾಯದ ಶಾಸಕರು ಭೇಟಿ ನೀಡಿ ಬೆಂಬಲ ನೀಡಲಿದ್ದು, ಕೆಲ ಶಾಸಕರು ತಮ್ಮ ಭೇಟಿಗಾಗಿ ಸಮಯ ನಿಗದಿಪಡಿಸಿಕೊಳ್ಳುತ್ತಿದ್ದಾರೆ.
‘ಹೆಂಡ್ತಿಯನ್ನು ಚೆನ್ನಾಗಿ ನೋಡಿಕೊ’ ಎಂದ ಸಂಬಂಧಿಕರಿಬ್ಬರಿಗೂ ಇರಿದ; ಒಬ್ಬನ ಸಾವು, ಇನ್ನೊಬ್ಬನ ಪರಿಸ್ಥಿತಿ ಗಂಭೀರ

ಬಟ್ಟೆ ಧರಿಸದೆ ಮಲಗುವುದರಿಂದ ಏನು ಪ್ರಯೋಜನ?; ಇಲ್ಲಿದೆ ಅಧ್ಯಯನದ ಅಂಶಗಳು..

ಪತ್ನಿ ಗರ್ಭಿಣಿ, ಪತಿಗೆ ಅನುಮಾನ; ಹೊರಬಿತ್ತು ಕೊಲೆ ಹಿಂದಿನ ಕಾರಣ

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:two × four =
Remember me
