ಬಾಗಲಕೋಟೆ:ರಾಜ್ಯದಲ್ಲಿ ತೀವ್ರ ಸಂಚಲನ ಹಾಗೂ ಕುತೂಹಲ ಮೂಡಿಸಿರುವ ಪಂಚಮಸಾಲಿ ಸಮಾಜದ 3ನೇ ಪೀಠದ ಉದ್ಘಾಟನೆ ಕಾರ್ಯಕ್ರಮವನ್ನು ಫೆ.14ರ ಬದಲು ಫೆ.13ರಂದು ನಡೆಸಲು ತೀರ್ವನಿಸಲಾಗಿದೆ. ಏತನ್ಮಧ್ಯೆ 3ನೇ ಪೀಠ ಸ್ಥಾಪನೆಗೆ ಹರಿಹರ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ ಸಂಪೂರ್ಣ ಬೆಂಬಲ ಘೋಷಿಸಿರುವುದು ಬಲ ಹೆಚ್ಚಿಸಿದೆ.
ಜಮಖಂಡಿ ತಾಲೂಕಿನ ಆಲಗೂರ ಗ್ರಾಮದಲ್ಲಿ ಈಗಾಗಲೆ ಒಕ್ಕೂಟದಿಂದ ಖರೀದಿ ಮಾಡಿರುವ ಒಂದೂವರೆ ಎಕರೆ ಜಾಗದಲ್ಲಿ ಪಟ್ಟಾಧಿಕಾರ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ಸಂಘಟಕರು ಮುಂದಾಗಿದ್ದಾರೆ. ಈ ಮೊದಲು ಪೀಠದ ಜಗದ್ಗುರುಗಳ ಪಟ್ಟಾಧಿಕಾರ ಕಾರ್ಯಕ್ರಮವನ್ನು ಫೆ.14ಕ್ಕೆ ನಿಗದಿ ಮಾಡಲಾಗಿತ್ತು. ಅಂದು ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಹಾಗೂ ವಿಪಕ್ಷ ಮುಖಂಡರು ಬರಲು ತೊಂದರೆ ಆಗುತ್ತದೆ. ಹೀಗಾಗಿ ಒಂದು ದಿನ ಮುಂಚಿತ ಅಂದರೆ ಫೆ.13ರಂದು ಪಟ್ಟಾಧಿಕಾರ ನಡೆಸಲು ಆಲಗೂರ ಧರಿದೇವರ ಮಠದಲ್ಲಿ ಭಾನುವಾರ ನಡೆದ ಒಕ್ಕೂಟದ ಸ್ವಾಮೀಜಿಗಳು ಹಾಗೂ ಭಕ್ತರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಂಗನಬಸವ ಸ್ವಾಮೀಜಿ ತಿಳಿಸಿದ್ದಾರೆ.
ಸಭೆಯಲ್ಲಿ ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟದ ಅಧ್ಯಕ್ಷರು ಹಾಗೂ 3ನೇ ಪೀಠದ ಜಗದ್ಗುರು ಬಬಲೇಶ್ವರದ ಮಹದೇವ ಶಿವಾಚಾರ್ಯರು, ಪ್ರಧಾನ ಕಾರ್ಯದರ್ಶಿ ಸಂಗನಬಸವ ಸ್ವಾಮೀಜಿ, ಬೆಂಡವಾಡದ ರೇವಣಸಿದ್ದ ಸ್ವಾಮೀಜಿ ಸೇರಿದಂತೆ ಒಕ್ಕೂಟದ ಹಲವು ಸ್ವಾಮೀಜಿಗಳು ಭಾಗವಹಿಸಿದ್ದರು.
ಹರಿಹರ ಪೀಠದ ಸಂಪೂರ್ಣ ಬೆಂಬಲ:ಇನ್ನು ಪಂಚಮಸಾಲಿ 3ನೇ ಪೀಠ ಸ್ಥಾಪನೆಗೆ ಈಗಾಗಲೆ ತಮ್ಮ ಸಂಪೂರ್ಣ ಬೆಂಬಲ ಘೊಷಿಸಿರುವ ಹರಿಹರ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ ಭಾನುವಾರ ಆಲಗೂರ ಗ್ರಾಮಕ್ಕೆ ಭೇಟಿ ನೀಡಿ ಒಕ್ಕೂಟದ ಸ್ವಾಮೀಜಿಗಳ ಜತೆ ಗೌಪ್ಯ ಸಭೆ ನಡೆಸಿದ್ದಾರೆ. 3ನೇ ಪೀಠ ಸ್ಥಾಪನೆಯನ್ನು ಸ್ವಾಗತಿಸಿರುವ ಅವರು ಹರಿಹರ ಪೀಠದ ಸಂಪೂರ್ಣ ಬೆಂಬಲವಿರುತ್ತದೆ ಎಂದು ಘೋಷಿಸಿದ್ದಾರೆ.
ಧಾರ್ವಿುಕ, ರಾಜಕೀಯ ಮುಖಂಡರಿಗೆ ಆಹ್ವಾನ:ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಹೆಸರಲ್ಲಿ ಫೆ. 13 ರಂದು ನಡೆಯುವ ಪೀಠ ಸ್ಥಾಪನೆಗೆ ನಾಡಿನ ನೂರಕ್ಕೂ ಅಧಿಕ ಹರಗುರು ಚರಮೂರ್ತಿಗಳು ಭಾಗವಹಿಸಲಿದ್ದಾರೆ. ವೀರಶೈವ ಲಿಂಗಾಯತ ಮಠಗಳ ಜತೆಗೆ ನಾಡಿನ ಎಲ್ಲ ಸಮುದಾಯಗಳ ಪೀಠಗಳ ಪೀಠಾಧೀಶರಿಗೆ ಆಹ್ವಾನ ನೀಡುತ್ತಿದ್ದೇವೆ. ಅತ್ಯಂತ ಸಂತೋಷದಿಂದಲೇ ಭಾಗವಹಿಸುವುದಾಗಿ ಅನೇಕ ಸಮಾಜಗಳ ಜಗದ್ಗುರುಗಳು, ಸ್ವಾಮೀಜಿಗಳು ನಮಗೆ ತಿಳಿಸಿದ್ದಾರೆ. ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿಕೆಶಿ ಸೇರಿ ಎಲ್ಲ ಪಕ್ಷಗಳ ಪ್ರಮುಖರನ್ನು ಪೀಠಾರೋಹಣ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. ಜತೆಗೆ ರಾಜ್ಯ ಎಲ್ಲ ಜಿಲ್ಲೆಗಳಿಂದಲೂ ವೀರಶೈವ ಲಿಂಗಾಯತರು, ಪಂಚಮಸಾಲಿ ಸಮಾಜ ಬಾಂಧವರು ಭಾಗವಹಿಸಲಿದ್ದಾರೆ ಎಂದು ಸಂಗನಬಸವ ಸ್ವಾಮೀಜಿ ತಿಳಿಸಿದ್ದಾರೆ.
ಪಂಚಮಸಾಲಿ ಪೀಠ ಸ್ಥಾಪನೆ ಕಾರ್ಯಕ್ರಮದಲ್ಲಿ ನಾಡಿನ ಎಲ್ಲ ಜಿಲ್ಲೆಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಪೀಠಾರೋಹಣ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಅಚ್ಚುಕಟ್ಟಾಗಿ ನಡೆಸೋಣ.
|ಸಂಗನಬಸವ ಸ್ವಾಮೀಜಿಪ್ರಧಾನ ಕಾರ್ಯದರ್ಶಿ, ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟ
ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟದಿಂದ ಪೀಠಾಧಿಕಾರ ಕಾರ್ಯಕ್ರಮ ನಡೆಯಲಿದೆ. ಸದುದ್ದೇಶಕ್ಕಾಗಿ ಈ ಕಾರ್ಯಕ್ರಮ ನಡೆಯುತ್ತಿದೆ. ಭಕ್ತರು ಬೇರೆಯವರ ಟೀಕೆ, ಟಿಪ್ಪಣಿಗಳಿಗೆ ಕಿವಿಗೊಡದೆ ಎಲ್ಲರೂ ಭಾಗವಹಿಸಿ.
|ರೇವಣಸಿದ್ದಸ್ವಾಮೀಜಿ ಉಪಾಧ್ಯಕ್ಷರು, ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟ
ಪೊಲೀಸ್​ ಕಾನ್​ಸ್ಟೆಬಲ್ ಹೆಂಡತಿ ಆತ್ಮಹತ್ಯೆ: ಪೊಲೀಸ್​ ವಸತಿಗೃಹದಲ್ಲೇ ನೇಣಿಗೆ ಶರಣು
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:4 × 4 =
Remember me
