ಮಂಡ್ಯ:ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮುಗಿಸಿ ಆಟೋದಲ್ಲಿ ಮನೆಗೆ ತೆರಳುತ್ತಿದ್ದವರು ಮಾರ್ಗಮಧ್ಯೆ ಅಪಘಾತಕ್ಕೀಡಾಗಿದ್ದಾರೆ. 12 ಜೆಡಿಎಸ್​ ಕಾರ್ಯಕರ್ತರು ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಿನ್ನೆ(ಸೋಮವಾರ) ರಾತ್ರಿ ಪಂಚರತ್ನ ರಥಯಾತ್ರೆಯ ಸಮಾವೇಶ ಇತ್ತು. ಈ ಕಾರ್ಯಕ್ರಮಕ್ಕೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಗರುಡಾಪುರ ಗ್ರಾಮದ ಜೆಡಿಎಸ್ ಕಾರ್ಯಕರ್ತರು ಆಟೋ ಮತ್ತು ಬೈಕ್​ಗಳಲ್ಲಿ ಆಗಮಿಸಿದ್ದರು.
ಕಾರ್ಯಕ್ರಮ ಮುಗಿಸಿ ವಾಪಸ್​ ಮನೆಗೆ ಹೋಗುವಾಗ ಆಟೋ ಮತ್ತು ಕಾರು ಡಿಕ್ಕಿಯಾಗಿದ್ದು, ಆಟೋ ಮಗುಚಿ ಬಿದ್ದಿದೆ. ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ 10 ಜನರಿಗೆ ಗಾಯಗಳಾದರೆ, ಆಟೋ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಇವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ವಿಡಿಯೋ ಕಾಲ್ ಮೂಲಕ ಗಾಯಾಳುಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್.​ಡಿ.ಕುಮಾರಸ್ವಾಮಿ, ಆರೋಗ್ಯ ವಿಚಾರಿಸಿದರು. ಇಂದು(ಮಂಗಳವಾರ) ಬೆಳಗ್ಗೆ 8.30ಕ್ಕೆ ಗಾಯಾಳುಗಳ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಎಚ್​ಡಿಕೆ ಮತ್ತು ಶಾಸಕ ಸುರೇಶ್ ಗೌಡ ಭೇಟಿ ನೀಡಲಿದ್ದಾರೆ.
ತಿಪಟೂರಲ್ಲಿ ಎರಡು ತಲೆ ಹಾವು ಮಾರಾಟಕ್ಕೆ ಯತ್ನ: ಪಿಡಿಒ ಸೇರಿ ಮೂವರ ಬಂಧನ

ಹೊಸ ವರ್ಷಕ್ಕೆ ಟೈಟ್ ರೂಲ್ಸ್: ಮತ್ತೆ ಮಾಸ್ಕ್ ಕಡ್ಡಾಯ; ಸಂಭ್ರಮಾಚರಣೆಗೆ ಮಾರ್ಗಸೂಚಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 4 =
Remember me
