ಬೆಂಗಳೂರು:ಶ್ರೀ ಜಗದ್ಗುರು ವಿಶ್ವಾರಾಧ್ಯ ಜನಕಲ್ಯಾಣ ಪ್ರತಿಷ್ಠಾನದ ಬೆಂಗಳೂರು ಶಾಖೆಯ ಆಶ್ರಯದಲ್ಲಿ ಪ್ರತಿವರ್ಷದಂತೆ ಧನುರ್ಮಾಸದ ಅಂಗವಾಗಿ ಕಾಶೀ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ಹಾಗೂ ಶ್ರೀ ಜಗದ್ಗುರು ಪಂಚಾಚಾರ್ಯರ ಪಂಚಸೂತ್ರ ಪ್ರವಚನ ಕಾರ್ಯಕ್ರಮ ಜ.1ರಿಂದ 6 ರವರೆಗೆ ನಡೆಯಲಿದೆ.
ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಆರು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ನಿತ್ಯ ಬೆಳಗ್ಗೆ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ, ಸಂಜೆ ಪ್ರವಚನ ನಡೆಯಲಿದೆ. ಈ ವರ್ಷ ಜಗತ್ತಿನ ಆದ್ಯ ಸೂತ್ರಕಾರರಾದ ಶ್ರೀಜಗದ್ಗುರು ಪಂಚಾಚಾರ್ಯರು ಬೋದಿಸಿವ ಪಂಚಸೂತ್ರಗಳ ಕುರಿತು ಜಗದ್ಗುರುಗಳು ಪ್ರವಚನ ನೀಡಲಿದ್ದಾರೆ.
ಕಾಶೀ ಜಗದ್ಗುರುಗಳಿಗೆ 75 ಸಂವತ್ಸರಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಜ.1ರಂದು ನಗರಕ್ಕೆ ಆಗಮಿಸುವ ಜಗದ್ಗುರುಗಳಿಗೆ 75 ವೈದಿಕರ ವೇದಘೋಷ ಹಾಗೂ 75 ಮುತ್ತೈದೆಯರ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಗುವುದು. ಅಂದು ಸಂಜೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಹಿರಿಯ ಸಾಹಿತಿ ಎಂ.ಜಿ.ನಾಗರಾಜ ಅವರಿಗೆ ಪಂಚಾಚಾರ್ಯಶ್ರೀ ಪ್ರಶಸ್ತಿ ಪ್ರದಾನ ಮಾಡಲಿದ್ದು, ಅಖಿಲ ಭಾರತ ವೀರಶೈವ ವೇದಿಕೆಯ ಅಧ್ಯಕ್ಷ ಜಯಂತ್ ಕುಮಾರ್ ಅವರನ್ನು ಸನ್ಮಾನಿಸಲಾಗುವುದು.
ಜ.5ರಂದು ಜಗದ್ಗುರುಗಳ ಅಮೃತಮಹೋತ್ಸವದ ಅಂಗವಾಗಿ ಗುರುವಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ವಿಭೂತಿಪುರ ಮತ್ತು ಶಿವಗಂಗೆ ಮಠದ ಶ್ರೀಗಳ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಸ್. ಪರಮಶಿವಯ್ಯ ಸೇರಿ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಜ.6 ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಆಯುರ್ವೇದ ಸಂಶೋಧಕ ಡಾ. ಬಿ. ನಂಜುಂಡಸ್ವಾಮಿ ಅವರಿಗೆ ‘ಶಿವಕಮಲ ಸಾಹಿತ್ಯ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಉಮಾದೇವಿ ಉಮಾಶಂಕರ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + twenty =
Remember me
