ಬೆಂಗಳೂರು:ಲಿಂಗಾಯತ ಪಂಚಮಸಾಲಿ ಸಮುದಾಯದ ಉಗ್ರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಕಳೆದ ವಾರ ಚಳಿಗಾಲದ ಅಧಿವೇಶನದಲ್ಲಿ ಲಿಂಗಾಯತರಿಗೆ 2ಡಿ ಪ್ರವರ್ಗ ಸೃಷ್ಟಿಸಿ ಮೀಸಲಾತಿ ಘೋಷಿಸಿತ್ತು. ಆದರೆ, ಇದಕ್ಕೆ ತಡೆ ನೀಡಿರುವ ಹೈಕೋರ್ಟ್​, ಮೀಸಲಾತಿ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮಧ್ಯಂತರ ಆದೇಶ ನೀಡಿದೆ!
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು ನೀಡುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರವೆಂದು ಆದೇಶಿಸುವಂತೆ ಕೋರಿ ಬೆಂಗಳೂರಿನ ಡಿ.ಜಿ. ರಾಘವೇಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಅರ್ಜಿದಾರ ಪರ ವಕೀಲ ಎಚ್.ವಿ. ಮಂಜುನಾಥ್, ಪಂಚಮಸಾಲಿ ಸಮುದಾಯಕ್ಕೆ ಸಂಬಂಧಿಸಿದ ಮಧ್ಯಂತರ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಡಿ.27ರಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಈ ಮಧ್ಯೆ ಲಿಂಗಾಯತ ಸಮುದಾಯಕ್ಕೆ 2ಡಿ ಹಾಗೂ ವಕ್ಕಲಿಗ ಸಮುದಾಯಕ್ಕೆ 2ಸಿ ಪ್ರವರ್ಗ ಸೃಷ್ಟಿಸಿ ಬೆಳಗಾವಿ ಅಧಿವೇಶನದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಸಲು ಸರ್ಕಾರ ಕಾಲಾವಕಾಶ ಕೋರಿತು. ಅದಕ್ಕೆ ನ್ಯಾಯಪೀಠ, ವರದಿ ಸಲ್ಲಿಸಲು ಸರ್ಕಾರಕ್ಕೆ ಕಾಲಾವಕಾಶ ನೀಡಿ, ಅಲ್ಲಿಯವರೆಗೂ ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಮಧ್ಯಂತರ ಆದೇಶ ನೀಡಿ ವಿಚಾರಣೆಯನ್ನು ಮುಂದೂಡಿತು.
ಹುಬ್ಬಳ್ಳಿಯಲ್ಲಿ ಪ್ರಧಾನಿ ರೋಡ್​ ಶೋ ವೇಳೆ ಭದ್ರತಾ ಲೋಪ: ಹಾರ ಹಿಡಿದು ಮೋದಿ ಕಾರಿನತ್ತ ನುಗ್ಗಿ ಬಂದ ಬಾಲಕ!

6 ಐಪಿಎಸ್ ಅಧಿಕಾರಿಗಳ ವರ್ಗಾವಣೆ‌: ತಿಂಗಳು ತುಂಬುವ ಮುನ್ನವೇ 2 ಬಾರಿ ಆರ್​.ಚೇತನ್​ ವರ್ಗಾವಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 15 =
Remember me
