ಬೆಳಗಾವಿ:ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸರ್ಕಾರ ಘೋಷಿಸಿರುವ 2ಡಿ ಮೀಸಲಾತಿಯನ್ನು ಸಂಪೂರ್ಣ ತಿರಸ್ಕರಿಸುವ ನಿರ್ಣಯ ಕೈಗೊಂಡಿದ್ದೇವೆ ಎಂದು ಕೂಡಲಸಂಗಮ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಗಾಂಧಿ ಭವನದಲ್ಲಿ ಪಂಚಮಸಾಲಿ ಜನಪ್ರತಿನಿಧಿಗಳ ಹಾಗೂ ಪದಾಧಿಕಾರಿಗಳ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡುತ್ತಾ, ಸರ್ಕಾರ ಘೋಷಿಸಿರುವ 2 ಡಿ ಮೀಸಲಾತಿಯನ್ನು ಪಂಚಮಸಾಲಿ ಸಮಾಜ ತಿರಸ್ಕರಿಸುತ್ತಿದೆ. ಮುಖ್ಯಮಂತ್ರಿಗಳು 24 ಗಂಟೆಯಲ್ಲಿ ಮೀಸಲಾತಿ ಕೊಡುತ್ತಾರೋ ಇಲ್ಲವೋ ಎನ್ನುವುದನ್ನು ಸ್ಪಷ್ಟ ಪಡಿಸಬೇಕು ಎಂದು ಆಗ್ರಹಿಸಿದರು.
ಇದೇ ತಿಂಗಳು 12ನೇ ತಾರೀಖಿನ ಒಳಗಾಗಿ ಮೀಸಲಾತಿ ಹೊರಡಿಸಿ ಗೆಜೆಟ್​​ನಲ್ಲಿ ಘೋಷಣೆ ಮಾಡಬೇಕು. ಇಲ್ಲದೇ ಹೋದಲ್ಲಿ ಜನವರಿ 13 ರಂದು ಹಾವೇರಿಯಲ್ಲಿರುವ ಮುಖ್ಯಮಂತ್ರಿ ಮನೆ ಮುಂದೆ ಒಂದು ದಿನದ ಉಗ್ರ ಹೋರಾಟ ಮಾಡುತ್ತೇವೆ. ಅವತ್ತೂ ಘೋಷಣೆ ಮಾಡದಿದ್ದರೆ ಮುಂದಿನ ಹೋರಾಟವನ್ನು ಹಾವೇರಿಯಲ್ಲಿ ಘೋಷಣೆ ಮಾಡುತ್ತೇವೆ ಎಂದು ಹೇಳಿದರು.
2ಡಿ ಮೀಸಲಾತಿಯನ್ನು ಸಂಪೂರ್ಣ ತಿರಸ್ಕರಿಸುವ ತೀರ್ಮಾನಕ್ಕೆ ಪಂಚಮಸಾಲಿ ಸಮಾಜ ಎಲ್ಲ ಬದ್ಧವಾಗಿದೆ. ನಮಗೆ 2ಎ ಮೀಸಲಾತಿಯಲ್ಲಿದ್ದ ಎಲ್ಲಾ ಸೌಲಭ್ಯ ಕೊಡಬೇಕು. ಸದ್ಯ ಸರ್ಕಾರ ಘೋಷಿಸಿರುವ 2 ಡಿ ಮೀಸಲಾತಿ ಗೊಂದಲಕ್ಕೆ ಕಾರಣವಾಗಿದೆ ಎಂದ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
