ಬೆಳಗಾವಿ:ಒಂದೆಡೆ ಸಚಿವ ಸಂಪುಟ ಸಭೆ, ಮತ್ತೊಂದೆಡೆ ಪಂಚಮಸಾಲಿ ಸಮುದಾಯದ ಪ್ರತಿಭಟನಾ ಸಮಾವೇಶದ ಮಧ್ಯೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರು ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದು, ಪಂಚಮಸಾಲಿ ಸಮುದಾಯದ ಬೇಡಿಕೆ ಇಂದೇ ಈಡೇರುತ್ತಾ? ಎಂಬ ಕುತೂಹಲ ಸಹಜವಾಗಿ ಮೂಡಿದೆ. ಸಚಿವ ಸಂಪುಟ ಸಭೆಯಲ್ಲಿ ಈ‌ ವರದಿ ಮಂಡಿಸಿ ಒಪ್ಪಿಗೆ ಪಡೆಯುವ ಸಾಧ್ಯತೆಗಳಿದ್ದು, ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯ ಆಯೋಜಿಸಿರುವ ಬೃಹತ್ ಪ್ರತಿಭಟನಾ ಸಮಾವೇಶವು‌ ವಿಜಯೋತ್ಸವವಾಗಿ ಪರಿವರ್ತನೆಯಾಗಲಿದೆ ಎಂದು ತರ್ಕಿಸಲಾಗುತ್ತಿದೆ.
ಈ ಕುರಿತು ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗಡೆ ಅವರು ಸರ್ಕಾರಕ್ಕೆಈಗಷ್ಟೇ ಮಧ್ಯಂತರ ವರದಿ ಸಲ್ಲಿಸಿದ್ದಾರೆ. ಕೂಡಲೇ ಈ ಬಗ್ಗೆ ಕಾನೂನು ಸಂಸದರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಮೀಸಲಾತಿ ಕುರಿತು ಸದಾಶಿವ ಆಯೋಗ ಹಾಗೂ ರಂಗರಾಜು ಆಯೋಗದ ವರದಿಗಳು ಬಂದಿವೆ. ಅವು ಇಂದಿಗೂ ಆಯೋಗದ ಮಟ್ಟದಲ್ಲೇ ಉಳಿದಿರುವುದರಿಂದ ಸರ್ಕಾರದಿಂದ ಯಾವುದೇ ಕ್ರಮ‌ ಕೈಗೊಂಡಿರಲಿಲ್ಲ. ಆದರೆ, ಹೆಗಡೆ ಅವರು ಈಗಷ್ಟೇ ಮಧ್ಯಂತರ ವರದಿ ಸಲ್ಲಿಸಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಸೇರಿದಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದರು.
ಇಮ್ರಾನ್ ಖಾನ್ ಆಡಿಯೋ ಲೀಕ್​: ನಿಮ್ಮಿಂದಾಗಿ ನನ್ನ ಖಾಸಗಿ ಅಂಗಗಳು ನೋಯುತ್ತಿವೆ.. ಇಂದು ಬರೋಕೆ ಆಗಲ್ಲ…

ಬೆಂಗಳೂರು ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಟ್ವೀಟ್​ ಮೂಲಕ ಬೆದರಿಕೆ ಹಾಕಿದ್ದ ಆರೋಪಿ ಯುವಕ ಅರೆಸ್ಟ್​!

ವಿದ್ಯಾರ್ಥಿ ಹಂತಕನ ಬಂಧನ: ಶಿಕ್ಷಕಿ ಮೇಲಿನ ಅತಿರೇಕದ ಪ್ರೇಮವೇ ಕೊಲೆಗೆ ಕಾರಣ? ವಾಟ್ಸ್​ಆ್ಯಪ್​ನಲ್ಲಿದೆ ರಹಸ್ಯ…

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × 4 =
Remember me
